ಹಾಸನ ವಿಭಾಗೀಯ ತನಿಖಾ ಸಂಚಾರ ನಿಯಂತ್ರಕ ದಳದ ತಪಾಸಣಾ ಇನ್ಸ್ಪೆಕ್ಟರ್ ಶಕುನಿಗೌಡ (57) ಮೃತ. ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ತಡೆದು, ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಉದ್ದೇಶದಿಂದ ರಸ್ತೆ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಶಕುನಿಗೌಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ನಂತರ ಕ್ಯಾಂಟರ್ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.