ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಶಾಲಾ ವಾಹನ ಚಾಲಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಅಪ್ರಾಪ್ತೆ ಮಗುವಿಗೆ ಜನ್ಮ ನೀಡಿದ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಿದ ಅವರು, ಈಚಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬರೂ ಪೊಲೀಸ್ ಕಾನೂನು, ನಿಯಮಗಳ ಬಗ್ಗೆ ತಿಳಿದುಕೊಳ್ಳುವ ಅಗತ್ಯ ಇದೆ. ರಸ್ತೆ ಸುರಕ್ಷತೆಯ ಕಾನೂನು ನಿಯಮಗಳು, ಮೋಟಾರು ಕಾಯ್ದೆ, ನಿಯಮಗಳ ಬಗ್ಗೆ ಅರಿತುಕೊಂಡರೆ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ. ವಿದ್ಯಾರ್ಥಿಗಳು ಕಾನೂನು ನಿಯಮಗಳ ಬಗ್ಗೆ ಅರಿವು ಹೊಂದಿ ಪಾಲಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು ಎಂದು ಕಿವಿಮಾತು ಹೇಳಿದರು.