ಹಸಿರು ಉಳಿಸುವುದು ಎಲ್ಲರ ಕರ್ತವ್ಯ

ಶಾಂತಿಗ್ರಾಮ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಹಾಗೂ ಶಾಂತಿಗ್ರಾಮ ಗ್ರಾಮ ಪಂಚಾಯಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಸಿಇಒ ಶುಭಂ ಶುಕ್ಲ ಉದ್ಘಾಟಿಸಿದರು. ಮುಖ್ಯ ಶಿಕ್ಷಕಿ ಆರ್.ತನುಜಾ, ಕೃಷ್ಣಪ್ರಸಾದ್, ಶಿಕ್ಷಕರು, ಗ್ರಾಮಸ್ಥರು ಇದ್ದರು.
ಶಾಂತಿಗ್ರಾಮ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಹಾಗೂ ಶಾಂತಿಗ್ರಾಮ ಗ್ರಾಮ ಪಂಚಾಯಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಸಿಇಒ ಶುಭಂ ಶುಕ್ಲ ಉದ್ಘಾಟಿಸಿದರು. ಮುಖ್ಯ ಶಿಕ್ಷಕಿ ಆರ್.ತನುಜಾ, ಕೃಷ್ಣಪ್ರಸಾದ್, ಶಿಕ್ಷಕರು, ಗ್ರಾಮಸ್ಥರು ಇದ್ದರು.
Published on
ಹಾಸನ: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಮುಂದಿನ ಪೀಳಿಗೆಗೆ ಸ್ವಚ್ಛ ಮತ್ತು ಹಸಿರು ಪರಿಸರವನ್ನು ಉಳಿಸಿ ಕೊಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಿಡಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹಾಸನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲ ಹೇಳಿದರು.
ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್), ಶಾಂತಿಗ್ರಾಮ ಹಾಗೂ ಶಾಂತಿಗ್ರಾಮ ಗ್ರಾಪಂ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಆಯೋಜಿಸಲಾಗಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಪರಿಸರ ಮಾಲಿನ್ಯ, ಅರಣ್ಯ ನಾಶ ಹಾಗೂ ಹವಾಮಾನ ವೈಪರೀತ್ಯಗಳು ಸಮಾಜಕ್ಕೆ ಗಂಭೀರ ಸವಾಲಾಗಿ ಪರಿಣಮಿಸುತ್ತಿವೆ. ಈ ಹಿನ್ನೆಲೆಯಲ್ಲಿ ಗಿಡಮರಗಳ ನೆಡುವಿಕೆ ಮತ್ತು ಅವುಗಳ ಪಾಲನೆಗೆ ಎಲ್ಲರೂ ಕೈಜೋಡಿಸಬೇಕೆಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 500 ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾಮಸ್ಥರು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.
ಶಾಂತಿಗ್ರಾಮ ಗ್ರಾಪಂ ಪಿಡಿಒ ಅಭಿಲಾಶ್ ಮಾತನಾಡಿ, ನೆಡಲಾದ ಪ್ರತಿಯೊಂದು ಗಿಡದ ಪಾಲನೆ ಮತ್ತು ಪೋಷಣೆಗೆ ಎಲ್ಲರೂ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕೆಂದು ಮನವಿ ಮಾಡಿದರು.
ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕಿ ಆರ್.ತನುಜಾ, ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್, ಶಿಕ್ಷಕ ವೃಂದ, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net