ಕಾನೂನಿನ ಮೂಲ ತಿಳಿಯುವುದು ಅವಶ್ಯಕ

ಹಾಸನದ ಸೆಂಟ್ರಲ್ ಕಾಮರ್ಸ್ ಪಿ.ಯು ಕಾಲೇಜಿನಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಸ್ಥಾಪಕ ಮಹೇಶ್, ಬಿ.ಎಸ್.ಶಿವಕುಮಾರ್, ಬಿ.ಆರ್.ಸಿಂಧು, ಪರಿಮಳ ಇತರರಿದ್ದರು.
ಹಾಸನದ ಸೆಂಟ್ರಲ್ ಕಾಮರ್ಸ್ ಪಿ.ಯು ಕಾಲೇಜಿನಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಸ್ಥಾಪಕ ಮಹೇಶ್, ಬಿ.ಎಸ್.ಶಿವಕುಮಾರ್, ಬಿ.ಆರ್.ಸಿಂಧು, ಪರಿಮಳ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • source of the law
ಹಾಸನ: ವಿದ್ಯಾರ್ಥಿ ದೆಸೆಯಲ್ಲಿಯೇ ಕಾನೂನಿನ ಮೂಲ ಅರಿವು ಇರುವುದು ಅವಶ್ಯಕ. ಇದು ಸಮಾಜದಲ್ಲಿ ಜವಾಬ್ದಾರಿಯುತ ಪ್ರಜೆಗಳಾಗಿ ಬದುಕಲು ಸಹಾಕಾರಿಯಾಗುತ್ತದೆ. ಪ್ರತಿಯೊಬ್ಬರೂ ಹಕ್ಕುಗಳ ಜತೆಗೆ ಕರ್ತವ್ಯಗಳನ್ನು ನಿರ್ವಹಿಸಬೇಕಾಗುತ್ತದೆ ಎಂದು ಸೆಂಟ್ರಲ್ ಕಾಮರ್ಸ್ ಕಾಲೇಜಿನ ಸ್ಥಾಪಕ ಮಹೇಶ್ ತಿಳಿಸಿದರು.
ಎಂ.ಕೃಷ್ಣ ಕಾನೂನು ಮಹಾವಿದ್ಯಾಯಲಯದ ಕಾನೂನು ಅರಿವು ಘಟಕ ಹಾಗೂ ಸೆಂಟ್ರಲ್ ಕಾಮರ್ಸ್ ಕಾಲೇಜಿನ ಆಶ್ರಯದಲ್ಲಿ ಸೆಂಟ್ರಲ್ ಕಾಮರ್ಸ್ ಪಿ.ಯು ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದ್ವಿತೀಯ ವರ್ಷದ ಕಾನೂನು ವಿದ್ಯಾರ್ಥಿನಿ ಸಿಂತು ಮಾತನಾಡಿ, ಬಾಲ ನ್ಯಾಯ ಕಾಯ್ದೆ 2015ರ ಅಡಿಯಲ್ಲಿ ಮಕ್ಕಳ ರಕ್ಷಣೆ ಮತ್ತು ಪಾಲನೆಗೆ ಇರುವ ಅವಕಾಶಗಳನ್ನು ಪ್ರತಿಯೊಬ್ಬರೂ ಅರಿಯಬೇಕು. ಮಕ್ಕಳಿಗೆ ಸುರಕ್ಷಿತ ಪರಿಸರ ಕಲ್ಪಿಸುವುದು ಸಮಾಜದ ಕರ್ತವ್ಯ ಎಂದರು.
ವಿದ್ಯಾರ್ಥಿ ಬಿ.ಎಸ್.ಶಿವಕುಮಾರ್ ಬಾಲ ಕಾರ್ಮಿಕ ಪದ್ಧತಿಯ ಬಗ್ಗೆ ವಿಷಯ ಮಂಡಿಸಿದರು. ಬಿ.ಆರ್.ಸಿಂಧು ಬಾಲ್ಯ ವಿವಾಹ ನಿಷೇಧ 2006 ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪರಿಮಳಾ ವಹಿಸಿದ್ದರು. ಕೆ.ಎನ್.ಶಿವಕುಮಾರ್, ಬಿ.ಆರ್.ಸ್ನೇಹಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net