ಕಾರ್ಯಕರ್ತರಲ್ಲಿ ಸ್ವಲ್ಪ ಇರಿಸುಮುರಿಸು ಆಗಿರುವುದು ಸತ್ಯ

ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ
Published on

ಪ್ರಮುಖ ಮುಖ್ಯಾಂಶಗಳು

  • ಕಾರ್ಯಕರ್ತರಲ್ಲಿ ಸ್ವಲ್ಪ ಇರಿಸುಮುರಿಸು ಆಗಿರುವುದು ಸತ್ಯ
  • ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ
ಹಾಸನ: ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಿಂದ ಸಾ.ರಾ.ಮಹೇಶ್ ಸ್ಪರ್ಧೆ ವಿಚಾರ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿ ಇವತ್ತಿನ ಕಾಲಘಟ್ಟದಲ್ಲಿ ಇವೆಲ್ಲವನ್ನೂ ಚರ್ಚೆ ಮಾಡುವುದು ಅಪ್ರಸ್ತುತ ಎಂದು ಹೇಳಿದರು.
ಅರಕಲಗೂಡು ತಾಲೂಕಿನ ಕೆಲಗಳಲೆ ಗ್ರಾಮದಲ್ಲಿ ಮಾತನಾಡಿ, ಕೆಲವೊಂದು ರಾಜಕಾರಣದ ಬೆಳವಣಿಗೆಗಳನ್ನು ಬಹಳ ಹತ್ತಿರದಿಂದ ನೀವು ನೋಡಿದ್ದೀರಿ. ನಿಮ್ಮ ಬಳಿ ಏನು ಮುಚ್ಚುಮರೆ ಮಾಡಲು ಆಗುವುದಿಲ್ಲ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರ ಅಭಿಮಾನಿಗಳು ಇರುವ ಕ್ಷೇತ್ರ. ನಮ್ಮನ್ನು ಪ್ರೀತಿಸುವ ದೊಡ್ಡ ವರ್ಗ ಆ ಕ್ಷೇತ್ರದಲ್ಲಿದೆ. ಸ್ವಾಭಾವಿಕವಾಗಿ ಸಾರ್ವಜನಿಕ ವಲಯದಲ್ಲಿ ನಿಂತು ಚುನಾಯಿತ ಪ್ರತಿನಿಧಿಗಳು ಚರ್ಚೆ ಮಾಡಿದ ಸಂದರ್ಭದಲ್ಲಿ ಕಾರ್ಯಕರ್ತರಲ್ಲಿ ಸ್ವಲ್ಪ ಇರಿಸುಮುರಿಸು ಆಗಿರುವುದು ಸತ್ಯ. ಏನೇ ಬಗೆ ಹರಿಯಬೇಕಾದರೂ ಕಾಲ ಬರಬೇಕು, ಕಾಲ ನಿರ್ಣಯ ಮಾಡುತ್ತದೆ. ವರಿಷ್ಠರು ಕಾರ್ಯಕರ್ತರ ಗೌರವವನ್ನು ಕಾಪಾಡಿಕೊಳ್ಳುವ ದೃಷ್ಟಿಯಲ್ಲಿ, ಕ್ಷೇತ್ರವನ್ನು ಉಳಿಸಿಕೊಳ್ಳಲು ಆಯಾ ಸಂದರ್ಭದಲ್ಲಿ ಒಳ್ಳೆಯ ತೀರ್ಮಾನ ತೆಗೆದುಕೊಳ್ಳುತ್ತಾರೆಂದು ಈ ಪಕ್ಷದ ಕಾರ್ಯಕರ್ತನಾಗಿ ನಂಬಿಕೆ ಇಟ್ಟುಕೊಂಡಿದ್ದೇನೆ ಎಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net