ಶಕ್ತಿ ಸದನಕ್ಕೆ ದಾಖಲಾದ ಮಹಿಳೆಯರ ಆರೋಗ್ಯ ತಪಾಸಣೆಗೆ ಕ್ರಮವಹಿಸಬೇಕು. ಮಾನವ ಮತ್ತು ಮಹಿಳೆಯರ ಹಕ್ಕುಗಳು ಉಲ್ಲಂಘನೆ ಆಗದಂತೆ ನಿಗಾವಹಿಸಿ ಅಸುರಕ್ಷಿತ ಹೆಣ್ಣು ಮಕ್ಕಳ ರಕ್ಷಣೆಗೆ ಒತ್ತು ನೀಡಬೇಕು. ಇನ್ನು ನಿರಾಶ್ರಿತರು ರಸ್ತೆ ಬದಿಯಲ್ಲಿ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಫ್ಲೈ ಓವರ್‌ಗಳಲ್ಲಿ, ಪಾರ್ಕ್‌ಗಳಲ್ಲಿ ಮಲಗಬಾರದು. ಬೀದಿಯಲ್ಲಿ ಮಾನಸಿಕ ಅಸ್ವಸ್ಥ ಹೆಣ್ಣು ಮಕ್ಕಳು ಓಡಾಡುತ್ತಿರುವವರನ್ನು ಗುರುತಿಸಿ ನಿರಾಶ್ರಿತರ ಕೇಂದ್ರದಲ್ಲಿ ತಂಗಲು ಅವಕಾಶ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.