ಪುನಾ ಒಂದಾದ ದಂಪತಿ ಇತರ ಪ್ರಕರಣಗಳ ದಂಪತಿಗಳಿಗೆ ಮಾದರಿಯಾಗಲಿ, ಪ್ರತಿಯೊಬ್ಬರ ಜೀವನದಲ್ಲೂ ಭಿನ್ನಾಭಿಪ್ರಾಯಗಳು ಇರುತ್ತವೆ. ಅವುಗಳನ್ನು ದೊಡ್ಡದು ಮಾಡದೆ ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಜೀವನ ನಡೆಸುವಂತೆ ಸಲಹೆ ನೀಡಿದರು. ಮನಸ್ಸಿನಲ್ಲಿ ಏನೂ ಇಟ್ಟುಕೊಳ್ಳದೆ ಸಂತೋಷದಿಂದ ಜೀವನ ಕಳೆಯಬೇಕು. ಇರುವುದೊಂದೇ ಜೀವನ, ಸಂತೋಷವಾಗಿ ಕಳೆಯಬೇಕು. ಅವರಿಗೆ ಭಗವಂತ ಒಳ್ಳೆಯದನ್ನು ಮಾಡಲಿ, ಅವರ ಜೀವನ ಸುಖಕರ, ಸಂತೋಷ, ನೆಮ್ಮದಿಯಾಗಿ ಇರಲಿ ಎಂದು ಶುಭಹಾರೈಸಿದರು.