ಕೆಂಪೇಗೌಡ ಜಯಂತಿ ಆಚರಣೆ ಪೂರ್ವಭಾವಿ ಸಭೆ

ಕೆಂಪೇಗೌಡರ ಜಯಂತಿ ಅಂಗವಾಗಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೆಯಲಾಗಿದ್ದ ಪೂರ್ವಬಾವಿ ಸಭೆಯಲ್ಲಿ ಶಾಸಕ ಎಚ್.ಕೆ.ಸುರೇಶ್ ಮಾತನಾಡಿದರು.
ಕೆಂಪೇಗೌಡರ ಜಯಂತಿ ಅಂಗವಾಗಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೆಯಲಾಗಿದ್ದ ಪೂರ್ವಬಾವಿ ಸಭೆಯಲ್ಲಿ ಶಾಸಕ ಎಚ್.ಕೆ.ಸುರೇಶ್ ಮಾತನಾಡಿದರು.
Published on
ಬೇಲೂರು: ಬೇಲೂರಿನಲ್ಲಿ ಕೆಂಪೇಗೌಡರ ಜಯಂತಿಯನ್ನು ಸಮಾಜದ ಎಲ್ಲ ಮುಖಂಡರು ಹಾಗೂ ಬಂಧುಗಳ ಸಹಕಾರದೊಂದಿಗೆ ಜೂ. 27 ರಂದು ಆಚರಿಸಬೇಕು ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ ಅಂಗವಾಗಿ ಸೋಮವಾರ ಆಯೋಜಿಸಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೆಂಪೇಗೌಡರು ಒಂದು ಸಮಾಜಕ್ಕೆ ಸೀಮಿತರಾದವರಲ್ಲ, ಅವರು ಎಲ್ಲ ಸಮುದಾಯಗಳಿಗೂ ಅವರವರ ವೃತ್ತಿಗನುಸಾರವಾಗಿ ಪೇಟೆ ಪಟ್ಟಣಗಳನ್ನು ನಿರ್ಮಿಸಿ ಅವರ ಜೀವನಕ್ಕೆ ದಾರಿ ಮಾಡಿ ಕೊಟ್ಟವರು ಎಂದು ಹೇಳಿದರು.
ಜೂ. 27 ರಂದೆ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ, ಮೆರವಣಿಗೆ, ವೇದಿಕೆ ಕಾರ್ಯಕ್ರಮವನ್ನು ಆಚರಿಸಿದರೆ ಅರ್ಥಬರುತ್ತದೆ ಎಂದು ಹೇಳಿದರು.
ಒಕ್ಕಲಿಗರ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ಗಣೇಶ್ ಮಾತನಾಡಿ, 13 ವರ್ಷದಿಂದ ಬೇಲೂರಿನಲ್ಲಿ ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಗುತ್ತಿದೆ. ಅದೇ ರೀತಿ ಈ ಬಾರಿಯೂ ಆಚರಿಸಲು ಮುಖಂಡರ ಸಭೆ ಕರೆದು ಚರ್ಚಿಸಿ ಸ್ವಾಮೀಜಿಗಳು ಬರುವ ದಿನಾಂಕವನ್ನು ಗೊತ್ತು ಪಡಿಸಲಾಗುವುದು ಎಂದರು.
ಒಕ್ಕಲಿಗರ ಸಂಘದ ಮಹಿಳಾ ಅಧ್ಯಕ್ಷೆ ಭಾರತೀಗೌಡ, ಒಕ್ಕಲಿಗರ ಸಂಘದ ಯುವ ವೇದಿಕೆ ಅಧ್ಯಕ್ಷ ಗಿರೀಶ್ ಮಾತನಾಡಿರು. ತಹಸೀಲ್ದಾರ್ ಶ್ರೀಧರ್ ಕಂಕನವಾಡಿ, ತಾಪಂ ಇಒ ಸತೀಶ್ ಕುಮಾರ್, ಬಿಇಒ ಬಾಗ್ಯಮ್ಮ, ಜಿಪಂ ಕುಡಿಯುವ ನೀರು ಸರಭರಾಜು ವಿಭಾಗದ ಎಇಇ ಅನ್ವರ್ ಭಾಷಾ, ಒಕ್ಕಲಿಗರ ಯುವ ವೇದಿಕೆ ಗೌರವಾಧ್ಯಕ್ಷ ಚಂದ್ರಣ್ಣ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net