ಹಾಸನ ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪೋಕ್ಸೋ ಸಮಿತಿ ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಹೇಮಾವತಿ ಮಾತನಾಡಿದರು. ಜಿ.ಕೆ.ದಾಕ್ಷಾಯಿಣಿ, ಹಿರಿಯ ಸಿವಿಲ್ ನ್ಯಾಯಾಧೀಶ ಗಿರೀಗೌಡ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿಲೀಪ್ ಇತರರು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಶಾಲಾ, ಕಾಲೇಜುಗಳಲ್ಲಿ ಪೋಕ್ಸೋ ಜಾಗೃತಿ ಮೂಡಿಸಿ
ಅಧಿಕಾರಿಗಳಿಗೆ ನ್ಯಾಯಾಧೀಶೆ ಹೇಮಾವತಿ ನಿರ್ದೇಶನ
ಜಿಲ್ಲಾ ಮಟ್ಟದ ಪೋಕ್ಸೋ ಸಮಿತಿ ಸಭೆ
ಹಾಸನ:ಪೋಕ್ಸೋ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ಶಾಲೆ, ಕಾಲೇಜುಗಳಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವಂತೆ ಪ್ರಧಾನ ಹಾಗೂ ಜಿಲ್ಲಾ ಸತ್ರ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಹೇಮಾವತಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪೋಕ್ಸೋ ಸಮಿತಿ ಸಭೆಯಲ್ಲಿ ಮಾತನಾಡಿ, ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳು ಕಂಡುಬರುತ್ತಿರುವುದರಿಂದ ಮಕ್ಕಳು ಪ್ರೌಢ ವ್ಯವಸ್ಥೆ ತಲುಪುವ ಮೊದಲೇ ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ತಿಳಿಸಿದರು.
ದೌರ್ಜನ್ಯದಿಂದ ಮಕ್ಕಳು ಮಾನಸಿಕ ಖಿನ್ನತೆಗೆ ಒಳಗಾಗದಂತೆ ಎಚ್ಚರವಹಿಸಬೇಕು. ಪೊಲೀಸ್ ಅಧಿಕಾರಿಗಳು ಪೋಕ್ಸೋ ಕಾಯ್ದೆಯಡಿ ದೂರು ಸಲ್ಲಿಕೆಯಾದರೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ರಕ್ಷಣೆ ನೀಡಬೇಕು ಎಂದು ಸೂಚನೆ ನೀಡಿದರು.
ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಮಕ್ಕಳ ಸುರಕ್ಷತೆ ಮತ್ತು ಭದ್ರತೆಗಾಗಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಸದಸ್ಯ ಕಾರ್ಯದರ್ಶಿ ಜಿ.ಕೆ.ದಾಕ್ಷಾಯಿಣಿ, ಹಿರಿಯ ಸಿವಿಲ್ ನ್ಯಾಯಾಧೀಶ ಗಿರೀಗೌಡ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿಲೀಪ್ ಇತರರು ಇದ್ದರು.