ಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಬುಧವಾರ ಭೇಟಿ ನೀಡಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಶುಭ ಹಾರೈಸಿ ಮಾತನಾಡಿದ ಅವರು, ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗುತ್ತಿದ್ದು, ತಾಲೂಕಿನಲ್ಲಿ 2,808 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು 12 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಶೈಕ್ಷಣಿಕ ಜೀವನದಲ್ಲಿ ಇದು ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಶಸ್ಸು ನಿಮ್ಮದಾಗಲಿ ಎಂದು ಹಾರೈಸಿದರು.