ಕೋಗಿಲಮನೆ ಗ್ರಾಮದಲ್ಲಿ ಹಸುವಿನ ಮೇಲೆ ಚಿರತೆ ದಾಳಿ

ಬೇಲೂರು ತಾಲೂಕಿನ ಕೋಗಿಲಮನೆ ಗ್ರಾಮದ ದೊರೆರಾಜು ಎಂಬುವವರ ಹಸುವಿನ ಮೇಲೆ ಚಿರತೆ ದಾಳಿ ನಡೆಸಿದ್ದರಿಂದ ಗಾಯ ಗೊಂಡಿರುವ ಚಿರತೆ.
ಬೇಲೂರು ತಾಲೂಕಿನ ಕೋಗಿಲಮನೆ ಗ್ರಾಮದ ದೊರೆರಾಜು ಎಂಬುವವರ ಹಸುವಿನ ಮೇಲೆ ಚಿರತೆ ದಾಳಿ ನಡೆಸಿದ್ದರಿಂದ ಗಾಯ ಗೊಂಡಿರುವ ಚಿರತೆ.
Published on
ಬೇಲೂರು: ಚಿರತೆಯೊಂದು ಹಸುವಿನ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ತಾಲೂಕಿನ ಕೋಗಿಲಮನೆ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಗುರುವಾರ ಮಧ್ಯಾಹ್ನ ಕೋಗಿಲೆ ಮನೆ ಗ್ರಾಮದ ದೊರೆರಾಜು ಎಂಬುವರು ಹಸುವನ್ನು ತಮ್ಮ ಜಮೀನಿನಲ್ಲಿ ಮೇಯಲು ಬಿಟ್ಟಿದ್ದರು. ಈ ಸಂದರ್ಭ ದೊಡ್ಡದಾದ ಚಿರತೆಯೊಂದು ಮೇಯುತಿದ್ದ ಹಸುವಿನ ಮೇಲೆ ಏಕಾಏಕಿ ದಾಳಿ ಮಾಡಿ ಹಸುವಿನ ಕೆಚ್ಚಲು ಹಾಗೂ ಹೊಟ್ಟೆ ಭಾಗಕ್ಕೆ ಗಂಭೀರವಾಗಿ ಗಾಯಗೊಳಿಸುತಿದ್ದ ಸಂದರ್ಭದಲ್ಲಿ ಹಸು ಕೂಗಿಕೊಂಡಿದ್ದರಿಂದ ಜಮೀನಿನ ಅಕ್ಕಪಕ್ಕದಲ್ಲಿದ್ದವರು ಜೋರಾಗಿ ಚೀರಾಡಿದ್ದರಿಂದ ಚಿರತೆ ಹಸುವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದೆ. ತಕ್ಷಣವೇ ಗ್ರಾಮಸ್ಥರು ಗಾಯಗೊಂಡಿದ್ದ ಹಸುವಿಗೆ ಚಿಕಿತ್ಸೆ ಕೊಡಿಸಿದ್ದಾರೆ. ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಂಡಿದ್ದಾರೆ.
ಬಿಕ್ಕೊಡು ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಮಾತನಾಡಿ, ಈಗಾಗಲೇ ಕಾಡಾನೆಗಳ ಹಾವಳಿಯಿಂದ ಮಲೆನಾಡು ಭಾಗದ ರೈತರು ಸಾಕಷ್ಟು ನಷ್ಟ ಅನುಭವಿಸುತಿದ್ದಾರೆ. ಈಗ ಗಾಯದ ಮೇಲೆ ಬರೆ ಎಳೆದಂತೆ. ಕೋಗಿಲಮನೆ ಗ್ರಾಮಸಲ್ಲಿ ಚಿರತೆಯೊಂದು ಕಳೆದ ಮೂರು ದಿನಗಳಿಂದ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಆದರೆ ಗುರುವಾರ ಮಧ್ಯಾಹ್ನ ಗ್ರಾಮದ ರೈತ ದೊರೆರಾಜು ಎಂಬುವರ ಹಸುವಿನ ಮೇಲೆ ಚಿರತೆ ದಾಳಿ ಮಾಡಿರುವುದು ಆತಂಕಕ್ಕೆ ಕಾರಣವಾಗಿದ್ದು, ಇನ್ನಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಎಚ್ಚೆತ್ತು ಚಿರತೆಯನ್ನು ಹಿಡಿದು ರೈತರ ಆತಂಕ ದೂರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net