ವಿದ್ಯಾರ್ಥಿಗಳು ಸವಲತ್ತನ್ನು ಸದ್ಬಳಕೆ ಮಾಡಿಕೊಳ್ಳಲಿ

ಚಗಚಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಸಮಾಜ ಸೇವಕ ಚಗಚಗೆರೆ ಧನಂಜಯ್ ನೋಟ್‌ಬುಕ್ ವಿತರಿಸಿದರು.
ಚಗಚಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಸಮಾಜ ಸೇವಕ ಚಗಚಗೆರೆ ಧನಂಜಯ್ ನೋಟ್‌ಬುಕ್ ವಿತರಿಸಿದರು.
Published on
ಗಂಡಸಿ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಲ್ಲಿ ಕೂಲಿ ಕಾರ್ಮಿಕರು, ಬಡ ಕುಟುಂಬದ ಮಕ್ಕಳೇ ಹೆಚ್ಚಾಗಿದ್ದು ಸರ್ಕಾರ, ಸಂಘ ಸಂಸ್ಥೆಗಳು, ಸಮಾಜ ಸೇವಕರು ನೀಡುವ ಉಚಿತ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಮಾಜ ಸೇವಕ ಚಗಚಗೆರೆ ಧನಂಜಯ್ ಸಲಹೆ ನೀಡಿದರು.
ಚಗಚಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ನೋಟ್‌ಬುಕ್ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾನೂ ಸಹ ಚಗಚಗೆರೆ ಶಾಲೆಯ ಹಿರಿಯ ವಿದ್ಯಾರ್ಥಿಯಾಗಿದ್ದು, 17 ವರ್ಷಗಳಿಂದ ನಿರಂತರವಾಗಿ ಸರ್ಕಾರಿ ಶಾಲಾ ಮಕ್ಕಳ ಸೇವೆ ಈ ಸೇವೆ ಮಾಡಲಾಗುತ್ತಿದೆ. ಇದು ಸಾರ್ಥಕತೆ ಆಗಬೇಕಾದರೆ ವಿದ್ಯಾರ್ಥಿಗಳು ನಿರಂತರವಾಗಿ ಕಠಿಣ ಶ್ರಮಪಟ್ಟು ವ್ಯಾಸಂಗ ಮಾಡಿ ಉನ್ನತ ಸ್ಥಾನ ಗಳಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮೋಹನ್ ಕುಮಾರ್, ಮಾಜಿ ಅಧ್ಯಕ್ಷ ಯೋಗೇಶ್, ನಿವೃತ್ತ ಶಿಕ್ಷಕ ರಾಮಚಂದ್ರು, ಕಸಾಪ ಹೋಬಳಿ ಅಧ್ಯಕ್ಷ ಜೈರಾಮ್, ಗ್ರಾಪಂ ಮಾಜಿ ಉಪಾಧ್ಯಕ್ಷೆ ಪ್ರಮೀಳಾ ಮರಿಯಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net