ಪ್ರತಿಭಾನ್ವಿತ ವಿದ್ಯಾರ್ಥಿಗಳು ನವೋದಯದಲ್ಲಿ ಅವಕಾಶ ಪಡೆಯಲಿ

ಪ್ರಾಂಶುಪಾಲ ಆರ್.ಚಕ್ರವರ್ತಿ
ಪ್ರಾಂಶುಪಾಲ ಆರ್.ಚಕ್ರವರ್ತಿ
Published on
ಹೊಳೆನರಸೀಪುರ: ಗ್ರಾಮೀಣ ಭಾಗದ ಹಿಂದುಳಿದ ಬಡ ರೈತರ ಪ್ರತಿಭಾನ್ವಿತ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ನವೋದಯದಂತಹ ಕೇಂದ್ರೀಯ ವಿದ್ಯಾಲಯಗಳಲ್ಲಿ ಅವಕಾಶ ಪಡೆಯುವಂತಾಗಬೇಕು ಎಂದು ಮಾವಿನ ಕರೆ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ಆರ್.ಚಕ್ರವರ್ತಿ ತಿಳಿಸಿದರು.
ಅರ್ಹತೆಯುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ ದೊರೆಯಬೇಕು. ಅದರಲ್ಲೂ ಗ್ರಾಮೀಣ ಜನರು ಮಾಹಿತಿ ಕೊರತೆಯಿಂದ ಅವಕಾಶ ವಂಚಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಾದ್ಯಮಗಳ ಸಹಕಾರ ಅತಿಮಖ್ಯವಾಗಿರುತ್ತದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದೇಶಾದ್ಯಂತ ಡಿ.13.ರ ಶನಿವಾರದಂದು ನವೋದಯ ಪ್ರವೇಶ ಪರೀಕ್ಷೆ ನಡೆಯಲಿದೆ. ಜಿಲ್ಲೆಯ 8 ತಾಲೂಕಿನಿಂದ ಬಾಲಕ, ಬಾಲಕಿಯರು ಸೇರಿದಂತೆ ಒಟ್ಟು 3544 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ನಿರೀಕ್ಷೆ ಇದೆ. ಮಾವಿನಕೆರೆ ನವೋದಯ ಶಾಲೆಗೆ ಆಯಾ ಜಾತಿ ವರ್ಗೀಕೃತ ಅನುಸಾರ ವರ್ಷಕ್ಕೆ ಒಟ್ಟು 80 ವಿದ್ಯಾರ್ಥಿಗಳಿಗೆ ಮಾತ್ರವೇ ಪ್ರವೇಶ ದೊರೆಯುತ್ತದೆ. ಊಟ, ವಸತಿ, ಕ್ರೀಡೆ, ಸಂಗೀತ ಎಲ್ಲ ರೀತಿಯ ಪಠ್ಯ ಮತ್ತು ಪಠ್ಯೇತರ ಚಟುವಟಿಕೆ ಜತೆಗೆ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಡಲು ಅನುಕೂಲಕರವಾಗಿದೆ. ಹಾಗಾಗಿ ಬಡ, ಗ್ರಾಮೀಣ ಅರ್ಹ ವಿದ್ಯಾರ್ಥಿಗಳು ಮುದಾಗಬೇಕೆಂದರು.
ಜಿಲ್ಲೆಯಲ್ಲಿ 15 ಪರೀಕ್ಷಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಡಿ.13 ರ ಬೆಳಗ್ಗೆ 11.30 ರೊಳಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶಿಸಬೇಕಿದೆ. ಹೊಳೆನರಸೀಪುರ ತಾಲೂಕಿನಲ್ಲಿ ಬಾಲಕ ಮತ್ತು ಬಾಲಕಿಯರ ಪದವಿಪೂರ್ವ ಕಾಲೇಜು ಹಾಗೂ ಪಾರ್ಕ್ ಹಿಂಭಾಗದ ಮಾಧ್ಯಮಿಕ ಶಾಲೆಯಲ್ಲಿ ಪರೀಕ್ಷಾ ಕೇಂದ್ರ ನಿಗದಿಸಲಾಗಿದೆ. ಜಿಲ್ಲೆಯ ಎಲ್ಲ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅಧೀಕ್ಷಕರು, ನಿರೀಕ್ಷಣಾಧಿಕಾರಿಗಳು ಪರೀಕ್ಷಾ ಕಾರ್ಯಗಳ ನಿರ್ವಹಣೆ ತರಬೇತಿಯಲ್ಲಿ ಪಾಲ್ಗೊಂಡಿದ್ದರು.
ನವೋದಯ ಶಾಲೆಯ ನಿರೀಕ್ಷಣಾಧಿಕಾರಿ ಜನಾರ್ಧನ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ನಂಜುಂಡೇಗೌಡ ಹಾಗೂ ಹಿರಿಯ ಪತ್ರಕರ್ತ ಉದಯಕುಮಾರ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಬಿ.ವೆಂಕಟೇಶ್, ಉಪನ್ಯಾಸಕರಾದ ಬಸವರಾಜು ಜನಾರ್ಧನ್ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net