ಎಸ್‌ಐಆರ್ ಪ್ರಕ್ರಿಯೆ ವೇಗ ಪಡೆದುಕೊಳ್ಳಲಿ

ಚನ್ನರಾಯಪಟ್ಟಣ ತಾಲೂಕಿನಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಸಿಎನ್ ಬಾಲಕೃಷ್ಣ ಮಾತನಾಡಿದರು. ಜಿ.ಎಸ್. ಶಂಕರಪ್ಪ, ಗಿರೀಶ್ ಬಾಬು, ಅನಿಲ್, ಪವನ್ ಇದ್ದರು.
ಚನ್ನರಾಯಪಟ್ಟಣ ತಾಲೂಕಿನಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಸಿಎನ್ ಬಾಲಕೃಷ್ಣ ಮಾತನಾಡಿದರು. ಜಿ.ಎಸ್. ಶಂಕರಪ್ಪ, ಗಿರೀಶ್ ಬಾಬು, ಅನಿಲ್, ಪವನ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಶಾಸಕ ಸಿ.ಎನ್.ಬಾಲಕೃಷ್ಣ ಸೂಚನೆ
ಚನ್ನರಾಯಪಟ್ಟಣ: ಪಟ್ಟಣದಲ್ಲಿ ಎಸ್‌ಐಆರ್ ಪ್ರಕ್ರಿಯೆ ಚುರುಕುಗೊಳಿಸಲು ಪುರಸಭೆಯ ಕಸ ಸಂಗ್ರಹಣೆ ಮಾಡುವ ಆಟೋಗಳ ಮೂಲಕ ಈ ಕುರಿತು ಪ್ರಚಾರ ಮಾಡಬೇಕು. ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಎಂದು ಸಲಹೆ ನೀಡಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಎಸ್‌ಐಆರ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪುರಸಭೆ ವ್ಯಾಪ್ತಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ವೇಗ ಕಡಿಮೆ ಇದೆ. ಇದಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಬೇಕು. ತಾಲೂಕಿನ 22 ಹಳ್ಳಿಗಳಲ್ಲಿ ಶೇ.80ಕ್ಕಿಂತ ಕಡಿಮೆ ಹಾಗೂ ಪಟ್ಟಣದ 12 ಭಾಗಗಳಲ್ಲಿ ಶೇ.60ಕ್ಕಿಂತ ಕಡಿಮೆ ಪ್ರಗತಿ ಆಗಿದೆ. ಲೋಪವಿಲ್ಲದೆ, ನಿಗದಿತ ಕಾಲಮಿತಿಯೊಳಗೆ ಪ್ರಕ್ರಿಯೆ ವೇಗವಾಗಿ ಪೂರ್ಣಗೊಳಿಸಬೇಕು ಎಂದರು.
ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ತಾಲೂಕಿನಲ್ಲಿ ಈವರೆಗೆ ಶೇ.85.41 ಪ್ರಗತಿಯಾಗಿದ್ದು, 6458 ಮತದಾರರು ಮರಣ ಹೊಂದಿದ್ದು, 3776 ಮಂದಿ ಶಾಶ್ವತ ವಲಸೆ ಹೋಗಿದ್ದಾರೆ. ಯಾವ ಮತದಾರರೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಬಿಎಲ್‌ಒಗಳು ಕರ್ತವ್ಯ ನಿರ್ವಹಿಸಬೇಕು. ನೈಜ ಮತದಾರರಿಗೆ ಅನ್ಯಾಯವಾಗಬಾರದು. ಇದೊಂದು ಉತ್ತಮ ಕಾರ್ಯ ಎಂದು ಪ್ರಶಂಸಿಸಿದರು.
ತಹಸೀಲ್ದಾರ್ ಜಿ.ಎಸ್.ಶಂಕರಪ್ಪ, ಗ್ರೇಡ್ 2 ತಹಸೀಲ್ದಾರ್ ಗಿರೀಶ್‌ಬಾಬು, ತಾಪಂ ಅಭಿವೃದ್ಧಿ ಅಧಿಕಾರಿ ಗಿರೀಶ್, ಶಿರಸ್ತೇದಾರ್ ಪವನ್, ಪುರಸಭೆ ಮುಖ್ಯಾಧಿಕಾರಿ ಆರ್. ಯತೀಶ್ ಕುಮಾರ್ ಚುನಾವಣಾ ವಿಭಾಗದ ಅನಿಲ್, ರಮೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net