ವಿದ್ಯಾರ್ಥಿಗಳ ಗುರಿ ದೊಡ್ಡದಾಗಿರಲಿ

ಹಾಸನ ನಗರದ ಗಂಧದಕೋಠಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. ನಿವೃತ್ತ ಶಿಕ್ಷಣಾಧಿಕಾರಿ ಜೆ.ಬಿ. ತಮ್ಮಣ್ಣಗೌಡ,  ಡಿ.ಕೆ. ಮಂಜಯ್ಯ, ಮೋಹನ್‌ಕುಮಾರ್, ಕಾಂತರಾಜು, ಪೂರ್ಣಿಮಾ, ಲೋಕೇಶ್ ಇತರರಿದ್ದರು.
ಹಾಸನ ನಗರದ ಗಂಧದಕೋಠಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. ನಿವೃತ್ತ ಶಿಕ್ಷಣಾಧಿಕಾರಿ ಜೆ.ಬಿ. ತಮ್ಮಣ್ಣಗೌಡ, ಡಿ.ಕೆ. ಮಂಜಯ್ಯ, ಮೋಹನ್‌ಕುಮಾರ್, ಕಾಂತರಾಜು, ಪೂರ್ಣಿಮಾ, ಲೋಕೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳ ಗುರಿ ದೊಡ್ಡದಾಗಿರಲಿ
  • ನಿವೃತ್ತ ಶಿಕ್ಷಣಾಧಿಕಾರಿ ತಮ್ಮಣ್ಣಗೌಡ ಸಲಹೆ
  • ಗಂಧದಕೋಠಿ ಸರ್ಕಾರಿ ಕಾಲೇಜಿನ ವಿವಿಧ ವೇದಿಕೆಗಳ ಸಮಾರೋಪ
ಹಾಸನ: ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಹೇಳಿದಂತೆ ಬಾಳಬೇಕು, ದುಡಿಯಬೇಕು, ಸಾಯಬೇಕು ಎಂಬ ಮಾತನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ನಿವೃತ್ತ ಶಿಕ್ಷಣಾಧಿಕಾರಿ ಜೆ.ಬಿ. ತಮ್ಮಣ್ಣಗೌಡ ಅಭಿಪ್ರಾಯಪಟ್ಟರು.
ನಗರದ ಗಂಧದಕೋಠಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ 2025-26 ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್, ರೆಡ್‌ಕ್ರಾಸ್, ರೆಡ್ ರಿಬ್ಬನ್ ಮತ್ತು ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವೇದಿಕೆ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ನಾವು 21ನೇ ಶತಮಾನದಲ್ಲಿ ಇದ್ದೇವೆ. ಇದು ಸ್ಪರ್ಧಾತ್ಮಕ ಪ್ರಪಂಚ. ಎಲ್ಲರೂ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಗೆಲ್ಲುವುದು ಸೋಲುವುದು ಸಹಜ. ಸೋಲು ಗೆಲುವಿನ ಮೆಟ್ಟಿಲು. ವಿದ್ಯಾರ್ಥಿಗಳ ಗುರಿ ಯಾವಾಗಲೂ ದೊಡ್ಡದಾಗಿರಬೇಕು. ಆಗ ಸಾಧನೆ ಕೂಡ ದೊಡ್ಡದಾಗಿರುತ್ತದೆ. ಜಾತಿ, ಮತಗಳ ಗೋಡೆಯನ್ನು ದಾಟಬೇಕು. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮಪಡಿಸಿಕೊಳ್ಳುವುದಕ್ಕಾಗಿ ತಪಸ್ಸು ಮಾಡಬೇಕು ಎಂದು ತಿಳಿಸಿದರು.
ಪ್ರಾಂಶುಪಾಲ ಡಿ.ಕೆ. ಮಂಜಯ್ಯ ಮಾತನಾಡಿ, ಕಾಲೇಜಿನ ಪರಿಸರ ತುಂಬ ಚೆನ್ನಾಗಿದ್ದು, ಎಲ್ಲ ಅಧ್ಯಾಪಕರು, ಸಿಬ್ಬಂದಿ ವಿದ್ಯಾರ್ಥಿಗಳ ಬೆಳವಣಿಗೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ಪ್ರಾಧ್ಯಾಪಕರು ಮತ್ತು ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಸಾಂಸ್ಕೃತಿಕ ವೇದಿಕೆ ಸಂಚಾಲಕ ಮೋಹನ್‌ಕುಮಾರ್, ಉಪನ್ಯಾಸಕ ಕಾಂತರಾಜು, ಪೂರ್ಣಿಮಾ, ಲೋಕೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net