ರಾಷ್ಟ್ರೀಯ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಲಿ

ಬೇಲೂರು ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದಲ್ಲಿ ಶಾಸಕ ಎಚ್.ಕೆ.ಸುರೇಶ್ ಮಗುವಿಗೆ ಲಸಿಕೆ ಹಾಕಿದರು. ಡಾ. ವಿಜಯ್, ಅಕ್ರಂ ಷರ್ೀ ಇತರರು ಇದ್ದರು.
ಬೇಲೂರು ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದಲ್ಲಿ ಶಾಸಕ ಎಚ್.ಕೆ.ಸುರೇಶ್ ಮಗುವಿಗೆ ಲಸಿಕೆ ಹಾಕಿದರು. ಡಾ. ವಿಜಯ್, ಅಕ್ರಂ ಷರ್ೀ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • national campaign
ಬೇಲೂರು: ಮಕ್ಕಳ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಪಾಲಕರು ತಮ್ಮ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸುವ ಮೂಲಕ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಕೈಜೋಡಿಸಬೇಕು ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಆಯೋಜಿಸಿದ್ದ ಎರಡನೇ ಹಂತದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಐದು ವರ್ಷದೊಳಗೆ 10,452 ಮಕ್ಕಳಿದ್ದು ಈ ಎಲ್ಲ ಮಕ್ಕಳಿಗೂ ಪಾಲಕರು ಲಸಿಕೆ ಹಾಕಿಸಲು ಮುಂದಾಗಬೇಕು. ಕಾರಣ ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಂಡು ಮಕ್ಕಳ ಆರೋಗ್ಯ ರಕ್ಷಿಸಲು ಮುಂದಾಗಬೇಕು. ಪಟ್ಟಣ ಹಾಗೂ ಗ್ರಾಮೀಣ ಭಾಗದ ಎಲ್ಲ ಮಕ್ಕಳಿಗೂ ಲಸಿಕೆ ಹಾಕುವುದಕ್ಕಾಗಿ 4 ದಿನಗಳ ಕಾಲ ಅವಕಾಶವಿದ್ದು, ವೈದ್ಯಾಧಿಕಾರಿಗಳು ಮತ್ತು ಅವರ ತಂಡ ಪ್ರತಿ ಮನೆ ಮನೆಗೂ ಬಂದು ಲಸಿಕೆ ಹಾಕಲಿದ್ದಾರೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು. ಸಿಬ್ಬಂದಿ ಸಹ ತಾಲೂಕಿನಲ್ಲಿರುವ ಐದು ವರ್ಷದೊಳಗಿನ ಯಾವುದೇ ಮಕ್ಕಳು ಲಸಿಕೆಯಿಂದ ತಪ್ಪಿಸಿಕೊಳ್ಳದಂತೆ ಎಚ್ಚರ ವಹಿಸಿ ಲಸಿಕೆ ಹಾಕಬೇಕು. ಇದರಿಂದ ದೇಶವನ್ನು ಪೋಲಿಯೋಮುಕ್ತವನ್ನಾಗಿ ಮಾಡಲು ಸಾಧ್ಯ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್ ಮಾತನಾಡಿ, ಬೇಲೂರು ತಾಲೂಕಿನಲ್ಲಿ 196 ಬೂತ್‌ಗಳಿದ್ದು, 195 ತಂಡಗಳನ್ನು ರಚಿಸಲಾಗಿದೆ. ತಾಲೂಕಿನಲ್ಲಿ ಐದು ವರ್ಷದೊಳಗೆ 10,452 ಮಕ್ಕಳಿದ್ದು, ಈ ಎಲ್ಲ ಮಕ್ಕಳಲ್ಲಿ ಇಂದು ಹುಟ್ಟಿದ ಮಕ್ಕಳಿಂದ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ಹಾಕುತ್ತಿದ್ದೇವೆ. ತಾಲೂಕಿನ ಜನರು ಇದರ ಸದುಪಯೋಗ ಪಡಿಸಿಕೊಂಡು ಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು ಎಂದರು.
ಪುರಸಭೆ ಅಧ್ಯಕ್ಷ ಅಕ್ರಂ ಷರೀಫ್, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸತೀಶ್, ಆರೋಗ್ಯಾಧಿಕಾರಿ ದಯಾನಂದ್, ರೋಟರಿ ಸಂಸ್ತೆಯ ರಾಘವೇಂದ್ರ, ಸರ್ಕಾರಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net