ಶಿಕ್ಷಣದ ಜತೆಗೆ ಸಂಸ್ಕಾರ ರೂಢಿಸಿಕೊಳ್ಳಲಿ

ಅರಕಲಗೂಡು ತಾಲೂಕು ರಾಮನಾಥಪುರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಚನ ಕಂಠಪಾಠ ಮಾಡಿದ ವಿದ್ಯಾರ್ಥಿಗಳಿಗೆ ವಚನ ಪುಸ್ತಕಗಳನ್ನು ವಿತರಿಸಲಾಯಿತು. ಎ. ಮಂಜು, ಸರ್ವಮಂಗಳ, ಕೃಷ್ಣೇಗೌಡ, ಸೋಮಶೇಖರ್ ಇತರರಿದ್ದರು.
ಅರಕಲಗೂಡು ತಾಲೂಕು ರಾಮನಾಥಪುರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಚನ ಕಂಠಪಾಠ ಮಾಡಿದ ವಿದ್ಯಾರ್ಥಿಗಳಿಗೆ ವಚನ ಪುಸ್ತಕಗಳನ್ನು ವಿತರಿಸಲಾಯಿತು. ಎ. ಮಂಜು, ಸರ್ವಮಂಗಳ, ಕೃಷ್ಣೇಗೌಡ, ಸೋಮಶೇಖರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳಿಗೆ ಶಾಸಕ ಎ. ಮಂಜು ಸಲಹೆ
ಅರಕಲಗೂಡು : ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಗಳಿಸುವ ಜತೆಗೆ ಉತ್ತಮ ಸಂಸ್ಕಾರ ರೂಢಿಸಿಕೊಳ್ಳಬೇಕು ಎಂದು ಶಾಸಕ ಎ. ಮಂಜು ಹೇಳಿದರು.
ತಾಲೂಕಿನ ರಾಮನಾಥಪುರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಾರ್ಷಿಕೋತ್ಸವ ಹಾಗೂ ಸಭಾಂಗಣದಲ್ಲಿ ಕಾಲೇಜು ವಾರ್ಷಿಕೋತ್ಸವ ಹಾಗೂ ವಚನ ಕಂಠಪಾಠ ಮಾಡಿದ ವಿದ್ಯಾರ್ಥಿಗಳಿಗೆ ವಚನ ಪುಸ್ತಕ ವಿತರಿಸಿ ಮಾತನಾಡಿದ ಅವರು, ವಿದ್ಯೆ ಜತೆಯಲ್ಲಿ ಕ್ರೀಡೆ, ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಬೇಕು. ಕಾಲೇಜಿನಲ್ಲಿ ಉತ್ತಮ ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಸಾಹಿತಿ ಸೀಬಹಳ್ಳಿ ಸೋಮಶೇಖರ್ ಮಾತನಾಡಿ, 12 ಶತಮಾನದ ಶಿವಶರಣರ ವಿಚಾರಧಾರೆಗಳನ್ನು ತಿಳಿಸಿ ಜ್ಞಾನದ ಜ್ಯೋತಿಯನ್ನು ಬೆಳಗಿಸುವ ಮಹಾತ್ಮರು ಯಾರಾದರೇನು ನಮ್ಮ ಬದುಕಿನಲ್ಲಿ ಸಂತರ ಬೆಳಕು ಬಿದ್ದರೆ ಸಾಕು. ಇಂತವರ ಅದರ್ಶ ತತ್ವಗಳನ್ನು ಅಳವಡಿಸಿಕೊಂಡು ಮುನ್ನಡೆಯಬೇಕು ಎಂದರು.
ಪ್ರಾಂಶುಪಾಲೆ ಎಂ.ಎಸ್. ಸರ್ವಮಂಗಳಾ, ಕಾಲೇಜು ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಕೃಷ್ಣೇಗೌಡ, ಉಪಾಧ್ಯಕ್ಷರು ರೂಪಾದೇವಿ ಮಹದೇವ್, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರು ಎಂ.ಎನ್. ಕುಮಾರಸ್ವಾಮಿ ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಕೆ.ಶ್ರೀನಿವಾಸ್, ಸಮಿತಿ ಸದಸ್ಯರಾದ ಐ.ಎಂ. ಸ್ವಾಮಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net