ಕೀಳರಿಮೆ ತೊರೆದು ಯಶಸ್ಸಿನ ಮೆಟ್ಟಿಲೇರಲಿ

ಅರಕಲಗೂಡಿನಲ್ಲಿ ಸ್ವಸ್ಥ ಸಮಾಜ ನಿರ್ಮಾಣ ಸಮಿತಿ ವತಿಯಿಂದ ಸೋಮವಾರ ಯುವ ಜನೋತ್ಸವ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಪ್ರದೀಪ್ ರಾಮಸ್ವಾಮಿ, ಅನಂತರಾಜು, ಮಂಜುಶೆಟ್ಟಿಗೌಡ, ಲೋಕೇಶ್, ಸುರೇಶ್ ಇತರರಿದ್ದರು.
ಅರಕಲಗೂಡಿನಲ್ಲಿ ಸ್ವಸ್ಥ ಸಮಾಜ ನಿರ್ಮಾಣ ಸಮಿತಿ ವತಿಯಿಂದ ಸೋಮವಾರ ಯುವ ಜನೋತ್ಸವ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಪ್ರದೀಪ್ ರಾಮಸ್ವಾಮಿ, ಅನಂತರಾಜು, ಮಂಜುಶೆಟ್ಟಿಗೌಡ, ಲೋಕೇಶ್, ಸುರೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸ್ವಸ್ಥ ಸಮಾಜ ನಿರ್ಮಾಣ ಸಮಿತಿ ಅಧ್ಯಕ್ಷ ಪ್ರದೀಪ್ ರಾಮಸ್ವಾಮಿ ಹೇಳಿಕೆ
  • ಯುವ ಜನೋತ್ಸವ

ಅರಕಲಗೂಡು:

ವಿದ್ಯಾರ್ಥಿಗಳಿಗೆ ಅಂಕಗಳಿಕೆ ಮುಖ್ಯವಾದರೂ ವಿವಿಧ ವಿಷಯಗಳ ಕುರಿತು ಜ್ಞಾನ ಸಂಪಾದನೆ ಮಾಡಿಕೊಳ್ಳುವುದು ಅಷ್ಟೇ ಅಗತ್ಯ. ಕೀಳರಿಮೆ ತೊರೆದು ಜೀವನದ ಏಳು-ಬೀಳುಗಳನ್ನು ಮೆಟ್ಟಿ ನಿಂತು ಯಶಸ್ಸಿನ ಮೆಟ್ಟಿಲೇರಬೇಕು ಎಂದು ಸ್ವಸ್ಥ ಸಮಾಜ ನಿರ್ಮಾಣ ಸಮಿತಿ ಅಧ್ಯಕ್ಷ ಪ್ರದೀಪ್ ರಾಮಸ್ವಾಮಿ ತಿಳಿಸಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಸ್ವಸ್ಥ ಸಮಾಜ ನಿರ್ಮಾಣ ಸಮಿತಿ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಯುವ ಜನೋತ್ಸವ, ಪ್ರಬಂಧ ಸ್ಪರ್ಧೆ ಹಾಗೂ ಚರ್ಚಾ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಭವಿಷ್ಯದಲ್ಲಿ ಏನಾಗಬೇಕು ಎಂಬುದನ್ನು ಮೊದಲೇ ನಿರ್ಧರಿಸಿಕೊಂಡು, ಆ ಗುರಿ ಸಾಧನೆಗೆ ನಿರಂತರ ಪ್ರಯತ್ನ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಪಠ್ಯ ವಿಷಯಗಳ ಜತೆಗೆ ಸಮಾಜ, ದೇಶ, ವಿಜ್ಞಾನ, ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳ ಬಗ್ಗೆ ಅರಿವು ಬೆಳೆಸಿಕೊಳ್ಳಬೇಕು ಎಂದರು.
ಪ್ರಸ್ತುತ ಸಾಮಾಜಿಕ ಜಾಲತಾಣಗಳು ಯುವ ಸಮುದಾಯದ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತಿವೆ. ಅವುಗಳನ್ನು ಕೇವಲ ಮನರಂಜನೆಗೆ ಸೀಮಿತಗೊಳಿಸದೆ, ಜ್ಞಾನ ವೃದ್ಧಿ, ದೇಶದ ಪ್ರಗತಿ ಹಾಗೂ ಸಾಮಾಜಿಕ ಜಾಗೃತಿಗೆ ಪೂರಕವಾಗಿ ಬಳಸಿಕೊಳ್ಳಬೇಕು ಎಂದರು.
ಯುವ ಜನರು ದೇಶದ ಭವಿಷ್ಯದ ಶಕ್ತಿಯಾಗಿದ್ದು, ಉತ್ತಮ ಆಲೋಚನೆ, ಶಿಸ್ತು, ಆತ್ಮವಿಶ್ವಾಸ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ತಮ್ಮದೇ ಆದ ಕೊಡುಗೆ ನೀಡಬೇಕು. ಸ್ಪರ್ಧಾತ್ಮಕ ಮನೋಭಾವದೊಂದಿಗೆ ಮುನ್ನಡೆಯುವ ಮೂಲಕ ಜೀವನದಲ್ಲಿ ಉತ್ತಮ ಸಾಧನೆ ಮಾಡಬಹುದು ಎಂದು ಕಿವಿಮಾತು ಹೇಳಿದರು.
ಪ್ರಾಂಶುಪಾಲ ಅನಂತರಾಜು ಮಾತನಾಡಿ, ಚರ್ಚಾ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಗಳು ವಿದ್ಯಾರ್ಥಿಗಳ ಜ್ಞಾನ ಹೆಚ್ಚಿಸುವುದರ ಜತೆಗೆ ತಮ್ಮ ವಿಚಾರಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸುವ ಸಾಮರ್ಥ್ಯ ಬೆಳೆಸುತ್ತವೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೇರಣೆ ನೀಡಲಿವೆ ಎಂದರು.
ವಿದ್ಯಾರ್ಥಿಗಳು ಪಠ್ಯಕ್ರಮದ ಜತೆಗೆ ಸಾಮಾನ್ಯ ಜ್ಞಾನ, ಪ್ರಚಲಿತ ವಿದ್ಯಮಾನಗಳು ಹಾಗೂ ಸಾಮಾಜಿಕ ವಿಚಾರಗಳ ಬಗ್ಗೆ ತಿಳಿದುಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅದಕ್ಕೆ ಸೂಕ್ತ ವೇದಿಕೆ ಕಲ್ಪಿಸುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಂಜು ಶೆಟ್ಟಿಗೌಡ, ಸದಸ್ಯ ಲೋಕೇಶ್, ನಿವೃತ್ತ ಪ್ರಾಂಶುಪಾಲ ಬಸವರಾಜು, ನಿವೃತ್ತ ಉಪನ್ಯಾಸಕ ಸುರೇಶ್, ತಾಲೂಕು ನೌಕರರ ಸಂಘದ ಮಾಜಿ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಪಾಂಡುರಂಗ, ನಸ್ರಲ್ಲಾ ಟಿಪ್ಪು, ಉಪನ್ಯಾಸಕರಾದ ದಶರಥ, ಕೃಷ್ಣೇಗೌಡ ಇತರರಿದ್ದರು.
ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಉಪನ್ಯಾಸಕರಾದ ಬಾಬು ವರ್ದನ್, ಶರತ್ ಪ್ರಸನ್ನ, ರವಿಕುಮಾರ್, ಶ್ವೇತ ಹಾಗೂ ಸುಧಾರಾಣಿ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net