ಮುಂದಿನ ಪೀಳಿಗೆಗೆ ಸಂಸ್ಕೃತಿ, ಪರಂಪರೆ ಗಟ್ಟಿಗೊಳಿಸೋಣ

 ಅರಕಲಗೂಡು ತಾಲೂಕಿನ ಕೆಲಗಳಲೆ ಗ್ರಾಮದಲ್ಲಿ ಸೋಮವಾರ ಶ್ರೀ ಕಲ್ಲೇಶ್ವರ, ಶ್ರೀ ಬಸವೇಶ್ವರ ದೇವಸ್ಥಾನ ಉದ್ಘಾಟನೆ ಅಂಗವಾಗಿ ಏರ್ಪಡಿಸಿದ್ದ ಧಾರ್ಮಿಕ ಸಭೆಯನ್ನು ಗಣ್ಯರು ಉದ್ಘಾಟಿಸಿದರು. ಹಾಸನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಶ್ರೀ ಬಸವರಾಜೇಂದ್ರ ಸ್ವಾಮೀಜಿ, ಕೆಸವತ್ತೂರು ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿ, ನಿಖಿಲ್ ಕುಮಾರಸ್ವಾಮಿ, ಎ.ಮಂಜು, ಎಂ.ಎಸ್.ಯೋಗೇಶ್ ಇತರರಿದ್ದರು.
ಅರಕಲಗೂಡು ತಾಲೂಕಿನ ಕೆಲಗಳಲೆ ಗ್ರಾಮದಲ್ಲಿ ಸೋಮವಾರ ಶ್ರೀ ಕಲ್ಲೇಶ್ವರ, ಶ್ರೀ ಬಸವೇಶ್ವರ ದೇವಸ್ಥಾನ ಉದ್ಘಾಟನೆ ಅಂಗವಾಗಿ ಏರ್ಪಡಿಸಿದ್ದ ಧಾರ್ಮಿಕ ಸಭೆಯನ್ನು ಗಣ್ಯರು ಉದ್ಘಾಟಿಸಿದರು. ಹಾಸನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಶ್ರೀ ಬಸವರಾಜೇಂದ್ರ ಸ್ವಾಮೀಜಿ, ಕೆಸವತ್ತೂರು ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿ, ನಿಖಿಲ್ ಕುಮಾರಸ್ವಾಮಿ, ಎ.ಮಂಜು, ಎಂ.ಎಸ್.ಯೋಗೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮುಂದಿನ ಪೀಳಿಗೆಗೆ ಸಂಸ್ಕೃತಿ, ಪರಂಪರೆ ಗಟ್ಟಿಗೊಳಿಸೋಣ
  • ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಲಹೆ
ಹಾಸನ: ನಮ್ಮ ಪೂರ್ವಿಕರು ಬಿಟ್ಟುಹೋಗಿರುವ ಸಂಸ್ಕೃತಿ, ಪರಂಪರೆ, ಅಧ್ಯಾತ್ಮ ಚಿಂತನೆಗಳನ್ನು ಯುವಕರು ಮೈಗೂಡಿಸಿಕೊಂಡು ಮುಂದಿನ ಪೀಳಿಗೆಯನ್ನು ಗಟ್ಟಿಗೊಳಿಸುವ ಕಾರ್ಯಗಳನ್ನು ಕೈಗೊಳ್ಳಬೇಕಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಹೋಬಳಿ ಕೆಲಗಳಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಕಲ್ಲೇಶ್ವರ ಮತ್ತು ಬಸವೇಶ್ವರ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಇಂತಹ ಧಾರ್ಮಿಕ ಸಮಾರಂಭದಲ್ಲಿ ಸಾವಿರಾರು ಸಂಖ್ಯೆಯ ಜನರಿಗೆ ಅನ್ನದಾಸೋಹವನ್ನು ಆಯೋಜನೆ ಮಾಡಿರುವುದು ಶ್ಲಾಘನೀಯವಾಗಿದೆ. ಅನ್ನದಾಸೋಹ ಅತ್ಯಂತ ಶ್ರೇಷ್ಠವಾದ ಕಾರ್ಯವಾಗಿದೆ. ಇದು ನಮ್ಮ ಶ್ರೀಮಂತಿಕೆ, ಜಾತಿ, ಧರ್ಮ ಅಥವಾ ಮನ್ಯಷ್ಯನ ಆರ್ಥಿಕ ಸ್ಥಿತಿಗತಿಯ ಮೇಲೆ ನಮ್ಮ ಜೀವನ ನಿರ್ಧಾರ ಆಗುವುದಿಲ್ಲ. ಭಗವಂತನ ಪುಣ್ಯ ಕಾರ್ಯದಲ್ಲಿ ಸಮಾಜವಾಗಿ ತೊಡಗಿಕೊಂಡಾಗ ಮಾತ್ರ ದೇವರ ಅನುಗ್ರಹ ದೊರೆಯತ್ತದೆ ಎಂದರು.
ಮುಂದಿನ ದಿನಗಳಲ್ಲಿ ರೈತರ ಬದುಕು ಹಸನುಗೊಳಿಸುವ ಸಲುವಾಗಿ ನಾವು ಮೊದಲು ನೀರು ಕೊಡುವ ಕಾಯಕವನ್ನು ಮೊದಲ ಆದ್ಯತೆ ಮೇಲೆ ಕೈಗೊಳ್ಳಬೇಕಿದೆ. ಈ ಸಲುವಾಗಿ ಈ ಭಾಗದಲ್ಲಿ ಮಲ್ಲಿಪಟ್ಟಣ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಬರಲಿದೆ. ಈ ಕೆಲಸವನ್ನು ಕ್ಷೇತ್ರದ ಶಾಸಕ ಎ.ಮಂಜು ಸಹಕಾರಗೊಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎ.ಮಂಜು, ದೇವಾಲಯವನ್ನು ಸಂಪೂರ್ಣವಾಗಿ ಕಲ್ಲಿನಿಂದ ಕಟ್ಟಲಾಗಿದೆ. ಇದು ಮುಂದಿನ ಹತ್ತು ತಲೆಮಾರಿಗೆ ಉಳಿಯಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮಲ್ಲಿಪಟ್ಟಣ ಏತ ನೀರಾವರಿ ಯೋಜನೆಯ ಮೊದಲ ಹಂತ ಮುಂದಿನ ನಾಲ್ಕೈದು ತಿಂಗಳಲ್ಲಿ ಚಾಲನೆ ದೊರೆಯಲಿದೆ. ಅಲ್ಲದೆ ಮಲ್ಲಿಪಟ್ಟಣ ಭಾಗದಲ್ಲಿ ಕಂಡುಬರುತ್ತಿರುವ ಆನೆ ಹಾವಳಿ ನಿಯಂತ್ರಣಕ್ಕೆ ಸರಕಾರ 40 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಕಂಬಿಗಳ ಅಳವಡಿಕೆ ಕಾರ್ಯ ಕೂಡ ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಮಾತನಾಡಿದರು. ಶ್ರೀ ಶಂಭುನಾಥಸ್ವಾಮೀಜಿ, ಶ್ರೀಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀಸದಾಶಿವ ಶಿವಾಚಾರ್ಯಸ್ವಾಮೀಜಿ, ಶ್ರೀಬಸವರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ಊರಿನ ಮುಖಂಡರು, ಗಣ್ಯರು ವೇದಿಕೆಯಲ್ಲಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net