ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪರಿಸರ ನಮಗೆ ಬದುಕಲು ಬೇಕಾದ ಎಲ್ಲ ಅಗತ್ಯಗಳನ್ನು ಪೂರೈಸಿದೆ. ಮುಂದಿನ ಪೀಳಿಗೆಗಾಗಿ ಹೆಚ್ಚು ಸಸಿಗಳನ್ನು ಬೆಳೆಸಿ, ಪೋಷಿಸಿ ಅವುಗಳನ್ನು ಕಾಪಾಡುವುದು, ಜಲ ಮೂಲಗಳನ್ನು ರಕ್ಷಿಸುವುದು ಸೇರಿದಂತೆ ಪರಿಸರ ಮಾಲಿನ್ಯವನ್ನು ತಡೆಗಟ್ಟಿ, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರ ಮೂಲಕ ಪರಿಸರ ಸಮತೋಲನ ಮಾಡಬೇಕು ಎಂದು ಸಲಹೆ ನೀಡಿದರು.