ಮೊಬೈಲ್ ಫೋನ್ ಬಳಕೆಗೆ ಮಿತಿ ಇರಲಿ

ಅರಕಲಗೂಡು ತಾಲೂಕಿನ ಕೊಣನೂರು ಬಿಎಸ್‌ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕ್ರೀಡೆ, ಸಾಂಸ್ಕೃತಿಕ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ ಸಮಾರಂಭದಲ್ಲಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎ. ಮಂಜು, ಗಿರೀಶ್,  ಸೋಮು, ಲೋಕೇಶ್, ಶ್ರೀನಿವಾಸ್, ಪುಟ್ಟರಾಜು ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ. ಮಂಜು ಸಲಹೆ
  • ಕೊಣನೂರು ಬಿಎಸ್‌ಎಸ್ ಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಅರಕಲಗೂಡು: ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ ಮಾಡಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಶಾಸಕ ಎ.ಮಂಜು ಸಲಹೆ ನೀಡಿದರು.
ತಾಲೂಕಿನ ಕೊಣನೂರು ಬಿಎಸ್‌ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕ್ರೀಡೆ, ಸಾಂಸ್ಕೃತಿಕ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ದೇಶ ಅಭಿವೃದ್ಧಿ ಪಥದಲ್ಲಿ ಸಾಗಬೇಕು ಎಂದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಣವೇ ಶಕ್ತಿ ಎಂಬುದನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಅರಿತು ಉತ್ತಮವಾಗಿ ಜ್ಞಾನಾರ್ಜನೆ ಮಾಡಬೇಕು. ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡಲು ಜ್ಞಾನವೇ ಪ್ರಧಾನವಾಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಕೆ ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಅದರ ದುಷ್ಪರಿಣಾಮಗಳ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಸಾಮಾಜಿಕ ಮಾಧ್ಯಮಗಳ ಅನಗತ್ಯ ಬಳಕೆಯಿಂದ ದೂರವಿದ್ದು, ಅಧ್ಯಯನಕ್ಕೆ ಆದ್ಯತೆ ನೀಡುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಪಾಲಕರೂ ತಮ್ಮ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಪ್ರತಿದಿನ ಗಮನಹರಿಸಬೇಕು. ಅವರ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡಬೇಕು ಎಂದು ಶಾಸಕ ಎ. ಮಂಜು ಮನವಿ ಮಾಡಿದರು.
ಪ್ರಾಂಶುಪಾಲ ಗಿರೀಶ್ ಮಾತನಾಡಿದರು. ಸೋಮು, ಲೋಕೇಶ್, ಶ್ರೀನಿವಾಸ್, ಪುಟ್ಟರಾಜು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು. ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net