ಕಳಪೆ ಕಾಮಗಾರಿ ವಿರುದ್ಧ ಸ್ಥಳೀಯರ ಆಕ್ರೋಶ

ಅರಸೀಕೆರೆ ನಗರದ ಮೆಳೆಯಮ್ಮ ದೇವಿ ದೇಗಲ ಸಂಪರ್ಕ ರಸ್ತೆ ಕಳಪೆ ಕಾಮಗಾರಿಯಿಂದ ಬಿರುಕು ಬಿಟ್ಟಿರುವುದು.
ಅರಸೀಕೆರೆ ನಗರದ ಮೆಳೆಯಮ್ಮ ದೇವಿ ದೇಗಲ ಸಂಪರ್ಕ ರಸ್ತೆ ಕಳಪೆ ಕಾಮಗಾರಿಯಿಂದ ಬಿರುಕು ಬಿಟ್ಟಿರುವುದು.
Published on
ಅರಸೀಕೆರೆ: ನಗರದ ಹೊರ ವಲಯದಲ್ಲಿ ಹಾದು ಹೋಗಿರುವ ಮಾಲೇಕಲ್, ತಿರುಪತಿ, ಹುಳಿಯಾರು ಸಂಪರ್ಕ ರಸ್ತೆ ಎಡಭಾಗಕ್ಕೆ ಹೊಂದಿಕೊಂಡಂತಿರುವ ರಸ್ತೆ ಕಾಮಗಾರಿ ಕಳಪೆಯಿಂದ ಕೂಡಿದ್ದು ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ನಗರಸಭೆ ವತಿಯಿಂದ ಇಲ್ಲಿನ ಕಾಂಕ್ರೀಟ್ ರಸ್ತೆ ಮತ್ತು ಕಾಂಪೌಂಡ್ ನಿರ್ಮಾಣಕ್ಕೆ ಸುಮಾರು ಅಂದಾಜು 70 ಲಕ್ಷ ರೂ.ಗಳು ಬಿಡುಗಡೆಯಾಗಿದೆ. ಗುತ್ತಿಗೆದಾರ ಕಾಮಗಾರಿಯನ್ನು ಸರಿಯಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ರಸ್ತೆ ಮಧ್ಯೆ ದೊಡ್ಡ ಬಿರುಕು ಕಾಣಿಸಿಕೊಂಡಿದೆ. ಸಾರ್ವಜನಿಕರ ತೆರಿಗೆ ಹಣ ಹೇಗೆ ದುರುಪಯೋಗವಾಗುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಕೇವಲ ಮೂರು ತಿಂಗಳಲ್ಲಿ ರಸ್ತೆ ಹಾಳಾಗಿದ್ದು ಯಾವುದೇ ಕಾರಣಕ್ಕೂ ಬಿಲ್ ನೀಡಬಾರದು. ಕಳಪೆ ಕಾಮಗಾರಿ ಕುರಿತು ಸಮಗ್ರ ತನಿಖೆ ನಡೆಸಿ ಲೋಪವೆಸಗಿದ ಗುತ್ತಿಗೆದಾರನ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕು ಸ್ಥಳೀಯರು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net