ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ

ಕರ್ನಾಟಕ ಬಂದ್ ಕರೆ ನಡುವೆಯೂ ಅರಸೀಕೆರೆ ನಗರದಲ್ಲಿ ವ್ಯಾಪಾರ ವಹಿವಾಟು ಸಹಜವಾಗಿತ್ತು.
ಕರ್ನಾಟಕ ಬಂದ್ ಕರೆ ನಡುವೆಯೂ ಅರಸೀಕೆರೆ ನಗರದಲ್ಲಿ ವ್ಯಾಪಾರ ವಹಿವಾಟು ಸಹಜವಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ಪೊಲೀಸ್ಟ್‌ರಿಂದ ಸೂಕ್ತ ಬಂದೋಬಸ್ತ್

ಅರಸೀಕೆರೆ:

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ ಕೆಲ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಗುರುವಾರ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಹೋಟೆಲ್, ಅಂಗಡಿ ಮುಂಗಟ್ಟುಗಳ ವ್ಯವಹಾರದಲ್ಲಿ ಯಾವುದೇ ವ್ಯತ್ಯಯವಾಗಿರಲಿಲ್ಲ. ಶಾಲಾ, ಕಾಲೇಜುಗಳು, ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಎಂದಿನಂತೆ ಕರ್ತವ್ಯ ನಿರ್ವಹಿಸಿದರು. ಕೆಎಸ್‌ಆರ್‌ಟಿಸಿ ಒಳಗೊಂಡಂತೆ ವಾಹನ ಸಂಚಾರ ಸಹಜವಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net