ಸತ್ಯದ ಮಾರ್ಗ ಜಗತ್ತಿಗೆ ಸಾರಿದ ಮಹಾವೀರ

ಆಲೂರು ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಆಯೋಜಿಸಿದ್ದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ತಹಸೀಲ್ದಾರ್ ಮಲ್ಲಿಕಾರ್ಜುನ ಉದ್ಘಾಟಿಸಿ ಮಾತನಾಡಿದರು.
ಆಲೂರು ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಆಯೋಜಿಸಿದ್ದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ತಹಸೀಲ್ದಾರ್ ಮಲ್ಲಿಕಾರ್ಜುನ ಉದ್ಘಾಟಿಸಿ ಮಾತನಾಡಿದರು.
Published on
ಆಲೂರು: ತ್ಯಾಗ ಎಂದರೆ ಏನೆಂದು ತೋರಿಸಿದ ಭಗವಾನ್ ಮಹಾವೀರರು ಅಹಿಂಸೆ ಮತ್ತು ಸತ್ಯದ ಮಾರ್ಗವನ್ನು ಜಗತ್ತಿಗೆ ಸಾರಿದ ಮಹಾನ್ ಜ್ಞಾನಿ ಎಂದು ತಹಸೀಲ್ದಾರ್ ಮಲ್ಲಿಕಾರ್ಜುನ್ ತಿಳಿಸಿದರು.
ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಾರಾಜರಾಗಿದ್ದ ವ್ಯಕ್ತಿ, ತ್ಯಾಗಮಯಿಯಾಗಿ ಜೀವನದ ಪರಮೋಚ್ಚ ಮೌಲ್ಯಗಳನ್ನು ಸಮಾಜಕ್ಕೆ ನೀಡಿದರು. ತಮ್ಮ 30ನೇ ವಯಸ್ಸಿನಲ್ಲಿ ಸಂಸಾರ ಸುಖ ತ್ಯಜಿಸಿ ಸನ್ಯಾಸಿಯಾದ ಅವರು 12 ವರ್ಷ ಕಠಿಣ ತಪಸ್ಸು ಮಾಡಿದರು. ನಂತರ ಅವರಿಗೆ ಪರಿಪೂರ್ಣ ಜ್ಞಾನ ಪ್ರಾಪ್ತಿಯಾಗಿತ್ತು. ಪಾಲಕರು ಆಸ್ತಿ ಮಾಡುವುದಕ್ಕಿಂತ ನಮ್ಮ ಮಕ್ಕಳನ್ನೇ ಸಮಾಜದ ಆಸ್ತಿ ಮಾಡುವಂತೆ ತಿಳಿಸಿ ಹೋದ ಇವರೇ ಸಮಾಜಕ್ಕೆ ಒಂದು ಸಂದೇಶವಾಗಿದ್ದಾರೆ ಎಂದು ತಿಳಿಸಿದರು.
ಉಪ ತಹಸೀಲ್ದಾರ್ ಅಂಕೇಗೌಡ, ಶಿರಸ್ತೇದಾರ್ ಮಧು, ಆಹಾರ ನಿರೀಕ್ಷಕ ಮೋಹನ್ ಕುಮಾರ್, ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net