ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ

ಸುಗ್ಗನಹಳ್ಳಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಶಾಸಕ ಸಿ.ಎನ್.ಬಾಲಕೃಷ್ಣ ಭೂಮಿ ಪೂಜೆ ನೆರವೇರಿಸಿದರು. ಮಹೇಶ್, ರವಿ, ಬಸವರಾಜು, ಮಂಜಣ್ಣ, ಜಯಂತ್, ಶಿವಲಿಂಗಪ್ಪ, ಕಾಳೇಗೌಡ ಇತರರು ಇದ್ದರು.
ಸುಗ್ಗನಹಳ್ಳಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಶಾಸಕ ಸಿ.ಎನ್.ಬಾಲಕೃಷ್ಣ ಭೂಮಿ ಪೂಜೆ ನೆರವೇರಿಸಿದರು. ಮಹೇಶ್, ರವಿ, ಬಸವರಾಜು, ಮಂಜಣ್ಣ, ಜಯಂತ್, ಶಿವಲಿಂಗಪ್ಪ, ಕಾಳೇಗೌಡ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸುಗ್ಗನಹಳ್ಳಿ ಗೇಟ್‌ನಿಂದ ಕಾಂತರಾಜಪುರ ಮುಖ್ಯರಸ್ತೆ
  • 2.5 ಕಿಲೋಮೀಟರ್ ರಸ್ತೆ ಅಭಿವೃದ್ಧಿ
ಶ್ರವಣಬೆಳಗೊಳ: ಸುಗ್ಗನಹಳ್ಳಿ ಗೇಟ್‌ನಿಂದ ಕಾಂತರಾಜಪುರ ಮುಖ್ಯರಸ್ತೆ ಸಂಪರ್ಕಿಸುವ 2.5 ಕಿಲೋಮೀಟರ್ ರಸ್ತೆ ಅಭಿವೃದ್ಧಿ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದು, ಇದೀಗ 1.6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಹೋಬಳಿಯ ಕಾಂತರಾಜಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಗ್ಗನಹಳ್ಳಿ ಗೇಟ್‌ನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಮಳೆಗಾಲದಲ್ಲಿ ತೊಂದರೆ ಅನುಭವಿಸುತ್ತಿದ್ದ ಗ್ರಾಮಸ್ಥರಿಗೆ ರಸ್ತೆ ನಿರ್ಮಾಣದಿಂದಾಗಿ ಅನುಕೂಲವಾಗಲಿದೆ. ಸುಗ್ಗನಹಳ್ಳಿ ಗ್ರಾಮದ ರಸ್ತೆ ಹದಗೆಟ್ಟಿದ್ದು, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ನಂತರ ಕೆ.ಹೊಸಹಳ್ಳಿ ಹಾಗೂ ಕೆ.ಬೊಮ್ಮೇನಹಳ್ಳಿ ಗ್ರಾಮಗಳ ನಿರಂತರ ವಿದ್ಯುತ್ ಸಂಪರ್ಕ ಕಾಮಗಾರಿಗೆ ಚಾಲನೆ ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರವಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಸವರಾಜು, ಇಂಜಿನಿಯರ್ ಮಂಜಣ್ಣ, ಗುತ್ತಿಗೆದಾರ ಜಯಂತ್,ಮುಖಂಡರಾದ ಶಿವಲಿಂಗಪ್ಪ, ಕಾಳೇಗೌಡ, ಕೀರ್ತಿ, ಶ್ರೀರಂಗ, ಕ್ಷೇತ್ರಪಾಲ್, ಮಧು, ತಾಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ ರಮೇಶ್, ಸುರೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net