ಜಾನುವಾರು ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿ

ರೈತ ವಿರೋಧಿ ಜಾನುವಾರು ವಧೆ ಹಾಗೂ ಮಾರಾಟ ನಿಷೇಧ ಕಾಯ್ದೆ 2020 ವಾಪಸ್ ಪಡೆದು, ರೈತರ ಜಾನುವಾರು ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಜಿಲ್ಲಾ ದಲಿತ ಮತ್ತು ಜನಪರ ಚಳವಳಿಗಳ ಒಕ್ಕೂಟದವರು ಪ್ರತಿಭಟನೆ ನಡೆಸಿದರು.
ರೈತ ವಿರೋಧಿ ಜಾನುವಾರು ವಧೆ ಹಾಗೂ ಮಾರಾಟ ನಿಷೇಧ ಕಾಯ್ದೆ 2020 ವಾಪಸ್ ಪಡೆದು, ರೈತರ ಜಾನುವಾರು ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಜಿಲ್ಲಾ ದಲಿತ ಮತ್ತು ಜನಪರ ಚಳವಳಿಗಳ ಒಕ್ಕೂಟದವರು ಪ್ರತಿಭಟನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಜಾನುವಾರು ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿ
  • ವಿವಿಧ ರೈತ ಸಂಘಟನೆಗಳಿಂದ ಹೋರಾಟ
  • ಕಾಯ್ದೆ ವಾಪಸ್ ಪಡೆಯಲು ಆಗ್ರಹ
ಹಾಸನ: ರೈತ ವಿರೋಧಿ ಜಾನುವಾರು ವಧೆ ಹಾಗೂ ಮಾರಾಟ ನಿಷೇಧ ಕಾಯ್ದೆ 2020 ವಾಪಸ್ ಪಡೆದು, ರೈತರ ಜಾನುವಾರು ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಜಿಲ್ಲಾ ದಲಿತ ಮತ್ತು ಜನಪರ ಚಳವಳಿಗಳ ಒಕ್ಕೂಟದವರು ಮಂಗಳವಾರ ಪ್ರತಿಭಟನೆ ನಡೆಸಿದರು.
ಕೃಷಿ ಕ್ಷೇತ್ರ ಸಂಕಷ್ಟದಲ್ಲಿರುವಾಗ, ಕೃಷಿ ಆದಾಯವನ್ನೇ ನಂಬಿ ಬದುಕು ನಡೆಸಲಾಗದ ರೈತ ಸಮುದಾಯ, ಹೈನುಗಾರಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಬದುಕು ಕಂಡುಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಹಸುಗಳಿಗೆ ವಯಸ್ಸಾದ ಮೇಲೆ, ಗಂಡು ಕರುಗಳನ್ನು ಸಾಕುವುದು ರೈತ ಸಮುದಾಯಕ್ಕೆ ದೊಡ್ಡ ಹೊರೆಯಾಗುತ್ತದೆ. ಈ ಎಲ್ಲ ಉದ್ದೇಶದಿಂದ ಅನುಪಯುಕ್ತ ರಾಸುಗಳನ್ನು ಮಾರಾಟ ಮಾಡುವ ಮೂಲಕ ಅಲ್ಪ ಸ್ವಲ್ಪ ಆದಾಯ ಪಡೆಯುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಜಾರಿಯಲ್ಲಿರುವ ಜಾನುವಾರು ವಧೆ ಹಾಗೂ ಮಾರಾಟ ನಿಷೇಧ ಕಾಯ್ದೆಯಿಂದ ರೈತರು ತಮ್ಮ ರಾಸುಗಳನ್ನು ಮುಕ್ತವಾಗಿ ಮಾರಾಟ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಮತ್ತೊಂದೆಡೆ ಈ ಕಾಯ್ದೆಯನ್ನು ದುರುಪಯೋಗ ಪಡಿಸಿಕೊಂಡು ಕೆಲವರು ನೈತಿಕ ಪೊಲೀಸ್‌ಗಿರಿ ತೋರುವ ಕೆಲಸಕ್ಕೂ ಮುಂದಾಗಿದ್ದಾರೆ. ಸಂವಿಧಾನದಲ್ಲಿ ಭಾರತದ ಪ್ರತಿಯೊಬ್ಬ ಪ್ರಜೆಗೂ ತನಗೆ ಬೇಕಾದ ಧರ್ಮ ಅನುಸರಿಸುವ ಮತ್ತು ತನಗೆ ಬೇಕಾದ ಆಹಾರ ತಿನ್ನುವ ಮುಕ್ತ ಸ್ವಾತಂತ್ರೃ ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆ ಕುರ್ಬಾನಿಗೆ ಗೋವುಗಳನ್ನು ಬಳಸಬಾರದೆಂಬ ಜಿಲ್ಲಾಡಳಿತದ ಸೂಚನೆ ನೀಡಿದೆ. ಈ ನಿಲುವುಗಳನ್ನು ಸಡಿಲಗೊಳಿಸಿ, ರೈತರು ತಮ್ಮ ರಾಸುಗಳನ್ನು ಮುಕ್ತವಾಗಿ ಮಾರಾಟ ಮಾಡುವ ವ್ಯವಸ್ಥೆ ಕಲ್ಪಿಸಿ ಕೊಡಬೇಕು ಎಂದರು.
ಸಂಘಟನೆ ಮುಖಂಡರಾದ ಎಚ್.ಎಸ್.ಪವಿತ್ರಾ ಮಂಜುನಾಥ್, ಕೆಪಿಆರ್‌ಎಸ್ ಜಿಲ್ಲಾಧ್ಯಕ್ಷ ಎಚ್.ಆರ್.ನವೀನ್ ಕುಮಾರ್, ಹುಲಿಕಲ್ ನಟರಾಜ್, ಮುಬಾಷಿರ್ ಅಹಮದ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net