ಫ್ಲೆಕ್ಸ್ ಅಳವಡಿಕೆಗೆ ನಿಯಮ ರೂಪಿಸಿ

ಪಟ್ಟಣ ಪಂಚಾಯಿತಿ ವತಿಯಿಂದ ತಹಸೀಲ್ದಾರ್ ಮಲ್ಲಿಕಾರ್ಜುನ ಅವರ ಅಧ್ಯಕ್ಷತೆಯಲ್ಲಿ ಬಜೆಟ್ ಪೂರ್ವಭಾಸಭೆ ನಡೆಯಿತು. ಮುಖ್ಯಾಧಿಕಾರಿ ಮಂಜುನಾಥ್ ಇತರರು ಇದ್ದರು.
ಪಟ್ಟಣ ಪಂಚಾಯಿತಿ ವತಿಯಿಂದ ತಹಸೀಲ್ದಾರ್ ಮಲ್ಲಿಕಾರ್ಜುನ ಅವರ ಅಧ್ಯಕ್ಷತೆಯಲ್ಲಿ ಬಜೆಟ್ ಪೂರ್ವಭಾಸಭೆ ನಡೆಯಿತು. ಮುಖ್ಯಾಧಿಕಾರಿ ಮಂಜುನಾಥ್ ಇತರರು ಇದ್ದರು.
Published on
ಆಲೂರು: ಪಟ್ಟಣದ ಸೌಂದರ್ಯಕ್ಕೆ ತೊಡಕಾಗಿರುವ ಫ್ಲೆಕ್ಸ್‌ಗಳನ್ನು ಅಳವಡಿಸಿ ತೆರವುಗೊಳಿಸಲು ಸಂವಿಧಾನ ಬದ್ಧ ನಿಯಮಾವಳಿ ರೂಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.
ಪಟ್ಟಣ ಪಂಚಾಯಿತಿ ವತಿಯಿಂದ ಆಡಳಿತಾಧಿಕಾರಿ ಹಾಗೂ ತಹಸೀಲ್ದಾರ್ ಮಲ್ಲಿಕಾರ್ಜುನ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಾರ್ವಜನಿಕರು ಆಗ್ರಹಿಸಿದರು.
ಪಟ್ಟಣದ ಆಯ್ದ ಸ್ಥಳಗಳಲ್ಲಿ, ಬಸ್ ನಿಲ್ದಾಣ, ಮಿನಿ ವಿಧಾನಸೌಧ, ತಾಲೂಕು ಪಂಚಾಯಿತಿ ಸೇರಿದಂತೆ ಹಲವು ಕಚೇರಿಗಳ ಮುಂದೆ, ರಸ್ತೆ ತಿರುವಿನಲ್ಲಿ ಜನಸಾಮಾನ್ಯರು, ಸಂಘ ಸಂಸ್ಥೆಗಳಿಂದ ಪ್ರಚಾರಕ್ಕಾಗಿ ಫ್ಲೆಕ್ಸ್‌ಗಳನ್ನು ಅಳವಡಿಸಿರುತ್ತಾರೆ. ಆದರೆ ಅವುಗಳನ್ನು ತೆರವು ಮಾಡದೆ ಬಿಟ್ಟಿರುವುದರಿಂದ ಪಟ್ಟಣದ ಸೌಂದರ್ಯಕ್ಕೆ ಧಕ್ಕೆಯಾಗುವುದರ ಜತೆಗೆ ಸಂಚಾರಕ್ಕೆ ತೊಡಕಾಗಿದೆ. ಫ್ಲೆಕ್ಸ್ ಅಳವಡಿಸಿ ತೆಗೆಯಲು ಕಾಲ ನಿದಿ ಮಾಡಿ ತೆರವುಗೊಳಿಸಬೇಕು ಎಂಬ ಒತ್ತಾಯ ಕೇಳಿಬಂತು.
ಅವಶ್ಯ ಇರುವ ಕಡೆ ರಸ್ತೆಗಳನ್ನು ನಿರ್ಮಾಣ ಮಾಡಿ, ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಬೇಕು. ಬೇಕಾದ ಕಡೆ ಮಾತ್ರ ಪೈಪ್‌ಲೈನ್ ಕಾಮಗಾರಿ ಮಾಡಬೇಕು. ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಬೇಕಯ. ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕಾನೂನು ಕ್ರಮ ಕೈಗೊಳ್ಳಬೇಕು. ಸ್ಮಶಾನ ಅಭಿವೃದ್ಧಿಗೆ ಮುಂದಾಗಬೇಕು. ಕಚೇರಿಯಲ್ಲಿ ಕೊರತೆ ಇರುವ ಸಿಬ್ಬಂದಿ ನೇಮಕ ಮಾಡಬೇಕು. ಹೀಗೆ ಹಲವು ಬೇಡಿಕೆಗಳನು ಸಂಘ ಸಂಸ್ಥೆಯ ಮುಖಂಡರು, ಸಾರ್ವಜನಿಕರು ಸಭೆಯ ಮುಂದಿಟ್ಟರು.
ಬಳಿಕ ಮುಖ್ಯಾಧಿಕಾರಿ ಮಂಜುನಾಥ್ ಅವರು ಮಾತನಾಡಿ, ಸಭೆಯಲ್ಲಿ ಕೇಳಿ ಬಂದಿರುವ ಸಲಹೆಗಳನ್ನು ಸ್ವೀಕರಿಸಿ ಮುಂದಿನ ಬಜೆಟ್‌ನಲ್ಲಿ ಅಳವಡಿಸಿಕೊಂಡು ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಪ.ಪಂ. ಮಾಜಿ ಅಧ್ಯಕ್ಷೆ ತಾಹೆರಾ ಬೇಗಂ, ಮಾಜಿ ಉಪಾಧ್ಯಕ್ಷರಾದ ಶಿವಣ್ಣ, ತೌಫಿಕ್ ಅಹಮದ್, ನಿಂಗರಾಜು(ಪಾಪು), ಮಾಜಿ ಸದಸ್ಯರಾದ ಹರೀಶ್, ಸ್ನೇಕ್ ಬಾಬು, ಸಂತೋಷ್, ಸಂದೇಶ್, ಎ.ಎಚ್. ರಮೇಶ್, ಖಾಲಿದ್ ಪಾಷ, ಸರ್ವರ್ ಪಾಷ, ಮೂರ್ತಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net