ಜನಸ್ಪಂದನ ಕಾರ್ಯಕ್ರಮ ಯಶಸ್ವಿಗೊಳಿಸಿ

ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜನಸ್ಪಂದನ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಲತಾ ಕುಮಾರಿ ಮಾತನಾಡಿದರು.
ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜನಸ್ಪಂದನ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಲತಾ ಕುಮಾರಿ ಮಾತನಾಡಿದರು.
Published on
ಬೇಲೂರು : ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರ ಅಧ್ಯಕ್ಷತೆಯಲ್ಲಿ ಬೇಲೂರು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಏ.10ರಂದು ಬೆಳಗ್ಗೆ 10 ಗಂಟೆಗೆ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲತಾ ಕುಮಾರಿ, ಗುರುವಾರ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕಿನ ವಿವಿಧ ಅಧಿಕಾರಿಗಳ ಸಭೆ ನಡೆಸಿ ಕಾರ್ಯಕ್ರಮದ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಲತಾ ಕುಮಾರಿ, ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅವರ ಕುಂದುಕೊರತೆ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಜನಸ್ಪಂದನ ಕಾರ್ಯಕ್ರಮ ನಡೆಸಲು ಸಚಿವರು ಸೂಚಿಸಿದ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಅನುಸರಿಸಿದ್ದು, ಕಾರ್ಯಕ್ರಮಕ್ಕೆ ಬಂದಂತಹ ಸಾರ್ವಜನಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸ್ವಯಂ ಜನಗಣತಿಗೆ ಕೌಂಟರ್ ತೆರೆಯಲು ಸೂಚಿಸಲಾಗಿದೆ. ಅಲ್ಲದೆ ಬಿಸಿಲು ಹೆಚ್ಚಾಗಿರುವ ಕಾರಣ ಸ್ಥಳದಲ್ಲಿ ವೈದ್ಯಾಧಿಕಾರಿಗಳು ಮತ್ತು ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಲಾಗಿದೆ. ಕಾರ್ಮಿಕ ಇಲಾಖೆಯಿಂದ ಇ- ಶ್ರಮ ಕಾರ್ಡ್ ಹಾಗೂ ಅವರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡುವ ಕೌಂಟರ್ ತೆರೆಯಲಾಗುವುದು. ಕೃಷಿ ಮತ್ತು ತೋಟಗಾರಿಕೆ, ಪಿಆರ್‌ಡಿ ಇಲಾಖೆಗೆ ಸಂಬಂಧಿಸಿದಂತೆ ವಿಶೇಷ ಕೌಂಟರ್ ತೆರೆಯಲಾಗುವುದು, ಏ.10ರಂದು ಬೆಳಗ್ಗೆ 8ರಿಂದ ಎಲ್ಲ ಅಧಿಕಾರಿಗಳು ಕಚೇರಿಯಲ್ಲಿ ಹಾಜರಿದ್ದು ಸಂಬಂಧಪಟ್ಟ ಇಲಾಖೆಗೆ ಸೇರಿದ ಅರ್ಜಿಗಳನ್ನು ಸ್ವೀಕರಿಸಿ ಸಾರ್ವಜನಿಕರಿಗೆ ಟೋಕನ್ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಅಂಗವಿಕಲರಿಗೆ ಹಾಗೂ ಹಿರಿಯ ನಾಗರಿಕರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ. ಬರುವವರಿಗೆ ಎಲ್ಲೆಡೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಗೃಹ ವ್ಯವಸ್ಥೆ ಕಲ್ಪಿಸಲು ತಿಳಿಸಲಾಗಿದೆ. ಕಡ್ಡಾಯವಾಗಿ ಎಲ್ಲ ಇಲಾಖೆ ಅಧಿಕಾರಿಗಳು ಖುದ್ದಾಗಿ ಹಾಜರಿರಬೇಕು ಸಾರ್ವಜನಿಕರು ನೇರವಾಗಿ ತಮ್ಮ ಸಮಸ್ಯೆಗಳನ್ನು ಸಚಿವರ ಬಳಿ ಅಹವಾಲು ಸಲ್ಲಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ವ್ಯಾಪಕ ಪ್ರಚಾರದ ಜತೆಗೆ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಡಂಗೂರದ ಮೂಲಕ ಮಾಹಿತಿ ನೀಡಲು ಈಗಾಗಲೇ ಸೂಚಿಸಲಾಗಿದೆ. ಸಚಿವರ ಜನಸ್ಪಂದನ ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಸಕಲೇಶಪುರ ಉಪವಿಭಾಗಾಧಿಕಾರಿ ಹುಲುಮನಿ ತಿಮ್ಮಣ್ಣ, ತಹಸೀಲ್ದಾರ್ ಶ್ರೀಧರ್ ಕಂಕನವಾಡಿ, ಪಿಐ ರೇವಣ್ಣ, ತಾಪಂ ಇಒ ಸತೀಶ್, ಸೆಸ್ಕ್ ಎಇಇ ಬಸವರಾಜು, ಪುರಸಭೆ ಮುಖ್ಯಾಧಿಕಾರಿ ಬಸವರಾಜು ಶಿಗ್ಗಾವಿ, ಆರೋಗ್ಯಾಧಿಕಾರಿ ಲೋಹಿತ್ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net