ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್ ಮಾತನಾಡಿ, ಬೇಲೂರು ತಾಲೂಕಿನಲ್ಲಿ ಐದು ವರ್ಷದೊಳಗಿನ 10,452 ಮಕ್ಕಳಿದ್ದು ಅವರಿಗೆ ಲಸಿಕೆ ನೀಡಲು ಗ್ರಾಮೀಣ ವ್ಯಾಪ್ತಿಯಲ್ಲಿ 86 ಬೂತ್‌ಗಳು, 3 ಟ್ರಾನ್ಸಿಟ್ ಬೂತ್‌ಗಳು ಹಾಗೂ ಪಟ್ಟಣ ಪ್ರದೇಶದಲ್ಲಿ 10 ಬೂತ್‌ಗಳು ಕಾರ್ಯನಿರ್ವಹಿಸಲಿವೆ. ಪಲ್ಸ್ ಪೋಲಿಯೋ ಕಾರ್ಯಕ್ರಮದ ದಿನ ಐದು ವರ್ಷದೊಳಗಿನ ಪ್ರತಿಯೊಬ್ಬ ಮಗುವಿಗೂ ಎರಡು ಹನಿ ಪೋಲಿಯೋ ಲಸಿಕೆ ನೀಡುವುದು ಅಗತ್ಯವಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಸಮೀಪದ ಬೂತ್‌ಗೆ ಕರೆತಂದು ಲಸಿಕೆ ಹಾಕಿಸಬೇಕು. ಈಗಾಗಲೇ ಹಲವು ಬಾರಿ ಲಸಿಕೆ ಪಡೆದ ಮಕ್ಕಳಿಗೂ ಈ ವಿಶೇಷ ಕಾರ್ಯಕ್ರಮದಡಿ ಮತ್ತೆ ಲಸಿಕೆ ನೀಡುವುದು ಸುರಕ್ಷಿತ ಹಾಗೂ ಅವಶ್ಯಕವಾಗಿದೆ ಎಂದರು.