ಅರಕಲಗೂಡು ತಾಲೂಕಿನ ಮಣಜೂರು ಗ್ರಾಮದಲ್ಲಿ ಭಾನುವಾರ ಶ್ರೀ ರಂಗನಾಥಸ್ವಾಮಿ ರಥೋತ್ಸವದಲ್ಲಿ ಭಕ್ತರು ತೇರು ಎಳೆದು ಸಂಭ್ರಮಿಸಿದರು.
Published on:
Copied
Follow Us
ಅರಕಲಗೂಡು: ತಾಲೂಕಿನ ಮಣಜೂರು ಶ್ರೀ ರಂಗನಾಥಸ್ವಾಮಿ ರಥೋತ್ಸವ ಭಾನುವಾರ ಸಂಭ್ರಮದಿಂದ ಜರುಗಿತು.
ದಾಸನಪುರ ಬೆಟ್ಟದದ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಜಾತ್ರೆ ಪ್ರಯುಕ್ತ ವಿವಿಧ ಪೂಜಾ ವಿಧಿವಿಧಾನಗಳನ್ನು ಪೂರೈಸಲಾಯಿತು. ಮಣಜೂರು ಗ್ರಾಮದಲ್ಲಿ ಅಲಂಕೃತ ರಥದ ಮೇಲೆ ಮೂಲ ದೇವರ ಉತ್ಸವಮೂರ್ತಿ ಕೂರಿಸಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಯಿತು. ಬಳಿಕ ಭಕ್ತರು ತೇರು ಎಳೆದು ಸಂಭ್ರಮಿಸಿದರು.
ರಥ ಮುಂದೆ ಚಲಿಸುವಾಗ ಭಕ್ತರು ಹಣ್ಣು-ದವನ ಎಸೆದು ಭಕ್ತಿ ಸಮರ್ಪಿಸಿದರು. ದೇವರಿಗೆ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಪುನೀತರಾದರು.