ಬೇಲೂರು: ಪ್ರೌಢಶಾಲೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿವೇಕಾನಂದ ಪ್ರೌಢಶಾಲೆ ಆವರಣದಲ್ಲಿ 1.5 ಲಕ್ಷ ರೂ. ಅನುಧಾನದಲ್ಲಿ ಶೌಚಗೃಹ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಪಟ್ಟಣದ ವಿವೇಕಾನಂದ ಪ್ರೌಢಶಾಲೆ ಆವರಣದಲ್ಲಿ ಶೌಚಗೃಹ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಸಾಕಷ್ಟು ವಿದ್ಯಾರ್ಥಿಗಳು ಇಂದು ಅನೇಕ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಅದೇ ರೀತಿ ವಿದ್ಯಾರ್ಥಿಗಳಾದ ನೀವು ಸಹ ಉತ್ತಮವಾಗಿ ವಿದ್ಯಾಭ್ಯಾಸ ಮಾಡುವ ಮೂಲಕ ಶಾಲೆ ಹಾಗೂ ಪಾಲಕರಿಗೆ ಹೆಸರು ತರಬೇಕು ಎಂದರು.
ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಸಂಸ್ಥಾಪಕ ಆರ್.ಎಸ್.ಸುಬ್ರಹ್ಮಣ್ಯ, ಪ್ರಾಂಶುಪಾಲ ಶಿವಕುಮಾರ್, ಪ್ರೌಢಶಾಲೆ ಮುಖ್ಯ ಶಿಕ್ಷಕ ಗಂಗೇಗೌಡ, ಉಪನ್ಯಾಸಕರಾದ ಹರೀಶ್, ಪ್ರಕಾಶ್ ಸೇರಿದಂತೆ ಇತರರಿದ್ದರು.