ವಕೀಲರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿ ತಾಲೂಕು ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪದಿಂದ ಹೊರಗುಳಿದು ಪ್ರತಿಭಟಿಸಿದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಎಲ್. ನಟರಾಜ್, ವಕೀಲರಾದ ಸಿ.ಎಂ. ಪೃಥ್ವಿ, ಸತೀಶ್, ಪುಟ್ಟಸ್ವಾಮಿಗೌಡ, ಸುನೀಲ್, ಸಿದ್ದೇಗೌಡ, ಷಡಕ್ಷರಿ, ಚಂದ್ರು, ಮಂಜುನಾಥ್ ಇತರರು ಇದ್ದರು.
ಬೇಲೂರು: ವಕೀಲರ ಸಮಸ್ಯೆಗಳಿಗೆ ಸಮರ್ಪಕ ಸ್ಪಂದನೆ ದೊರೆಯುತ್ತಿಲ್ಲ. ವಿವಿಧ ಪ್ರಕರಣಗಳ ವಿಚಾರಣೆಯಲ್ಲಿ ಅನಗತ್ಯ ವಿಳಂಬ ಮಾಡಲಾಗುತ್ತಿದೆ. ಇದರಿಂದ ನ್ಯಾಯಾಂಗ ವ್ಯವಸ್ಥೆ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆಯಾಗುತ್ತಿದೆ. ಹೀಗಾಗಿ ವಕೀಲರ ನ್ಯಾಯಸಮ್ಮತ ಬೇಡಿಕೆಗಳನ್ನು ಸರ್ಕಾರ, ಸಂಬಂಧಿಸಿದ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ತ್ವರಿತವಾಗಿ ಪರಿಹಾರ ಕಲ್ಪಿಸಬೇಕು ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಎಲ್. ನಟರಾಜ್ ಹೇಳಿದರು.
ರಾಜ್ಯ ವಕೀಲರ ಸಂಘದ ನಿರ್ದೇಶನದಂತೆ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬುಧವಾರ ತಾಲೂಕು ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪದಿಂದ ಹೊರಗುಳಿದು ಪ್ರತಿಭಟಿಸಿದರು.
ಈ ವೇಳೆ ಮಾತನಾಡಿದ ನಟರಾಜ್ ಅವರು, ವಕೀಲರು ನ್ಯಾಯಾಂಗ ವ್ಯವಸ್ಥೆಯ ಪ್ರಮುಖ ಅಂಗವಾಗಿದ್ದು, ಅವರ ವೃತ್ತಿಪರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ದೊರೆಯಬೇಕು. ವಿವಿಧ ಪ್ರಕರಣಗಳ ವಿಚಾರಣೆಯನ್ನು ಅನಗತ್ಯವಾಗಿ ವಿಳಂಬ ಮಾಡುತ್ತಿರುವುದರಿಂದ ಕಕ್ಷಿದಾರರು ಹಾಗೂ ವಕೀಲರಿಗೆ ತೊಂದರೆಯಾಗಿದೆ. ನ್ಯಾಯಾಂಗದ ಕಾರ್ಯಕ್ಷಮತೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವಕೀಲರಾದ ಸಿ.ಎಂ. ಪೃಥ್ವಿ, ಸತೀಶ್, ಪುಟ್ಟಸ್ವಾಮಿಗೌಡ, ಸುನೀಲ್, ಸಿದ್ದೇಗೌಡ, ಷಡಕ್ಷರಿ, ಚಂದ್ರು, ಮಂಜುನಾಥ್, ರಾಜೇಶ್, ರಾಜಶೇಖರ್, ರಿಚರ್ಡ್ ಸೇರಿದಂತೆ ಇತರರಿದ್ದರು.