ಮಹನೀಯದ ಆದರ್ಶ ಮುಂದಿನ ತಲೆಮಾರಿಗೂ ತಲುಪಲಿ

ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿಯನ್ನು ಗಣ್ಯರು ಉದ್ಘಾಟಿಸಿದರು. ಡಾ.ಎಚ್.ಎಲ್.ಮಲ್ಲೇಶ್‌ಗೌಡ, ತಾರಾನಾಥ್ ಇತರರಿದ್ದರು.
ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿಯನ್ನು ಗಣ್ಯರು ಉದ್ಘಾಟಿಸಿದರು. ಡಾ.ಎಚ್.ಎಲ್.ಮಲ್ಲೇಶ್‌ಗೌಡ, ತಾರಾನಾಥ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಹನೀಯದ ಆದರ್ಶ ಮುಂದಿನ ತಲೆಮಾರಿಗೂ ತಲುಪಲಿ
  • ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶ್‌ಗೌಡ ಸಲಹೆ
ಹಾಸನ: ಮಡಿವಾಳ ಮಾಚಿದೇವರು ಒಂದು ಸಮುದಾಯದ ವ್ಯಕ್ತಿಯಲ್ಲ. ಬದಲಾಗಿ ಶ್ರಮ, ಸತ್ಯ, ಸೇವೆ ಹಾಗೂ ಸಮಾನತೆಯ ಪ್ರತೀಕ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶ್‌ಗೌಡ ಹೇಳಿದರು.
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಕಾಯಕವೇ ಕೈಲಾಸ ಎಂಬ ತತ್ವವನ್ನು ಅಳವಡಿಸಿಕೊಂಡಿದ್ದ ಮಡಿವಾಳ ಮಾಚಿದೇವರು ಶೋಷಿತ ಮತ್ತು ಹಿಂದುಳಿದ ವರ್ಗಗಳ ಧ್ವನಿಯಾಗಿ ನಿಂತವರು ಎಂದು ಅಭಿಪ್ರಾಯಪಟ್ಟರು.
ಇಂದಿನ ಯುವ ಪೀಳಿಗೆ ಮಡಿವಾಳ ಮಾಚಿದೇವರ ಆದರ್ಶಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಮಾನತೆ ಸ್ಥಾಪನೆಯಾಗುತ್ತದೆ. ಜಯಂತಿಗಳ ಆಚರಣೆ ಕೇವಲ ಸಂಪ್ರದಾಯಕ್ಕೆ ಸೀಮಿತವಾಗದೆ ಅವರ ವಿಚಾರಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವ ಕಾರ್ಯವಾಗಬೇಕು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ತಾರಾನಾಥ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net