ಶಾಲಾ ಜಾಗವನ್ನು ಖಾತೆ ಮಾಡಿಸುವುದು ಅತ್ಯಗತ್ಯವಾಗಿದ್ದು, ಜಿಲ್ಲೆಯಲ್ಲಿ ಇನ್ನೂ 948 ಶಾಲೆಗಳಿಗೆ ಖಾತೆಯಾಗಿಲ್ಲ. ಈ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ತಹಸೀಲ್ದಾರ್‌ಗಳು ಕ್ರಮವಹಿಸುವಂತೆ ತಿಳಿಸಿದರಲ್ಲದೆ, ಆರ್‌ಟಿಸಿಯಲ್ಲಿ ಅಪ್‌ಡೇಟ್ ಆಗಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.