ಶಾಲೆಗೆ ಮೂಲಸೌಕರ್ಯ ನೀಡಲು ಕ್ರಮ

ಅರಕಲಗೂಡು ತಾಲೂಕಿನ ಶಣವಿನಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಯುವ ವಿಜ್ಞಾನಿ ಡಾ. ಮಹದೇಶ ಪ್ರಸಾದ್ ಪ್ರಿಂಟರ್ ಕೊಡುಗೆ ನೀಡಿದರು. ಯಾಸ್ಮೀನ್ ತಾಜ್, ಪರಮೇಶ್, ಸಾಗರ್, ದಿವ್ಯಾ, ಗುರಪ್ಪ, ಮಂಜುನಾಥ್ ಇತರರಿದ್ದರು.
ಅರಕಲಗೂಡು ತಾಲೂಕಿನ ಶಣವಿನಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಯುವ ವಿಜ್ಞಾನಿ ಡಾ. ಮಹದೇಶ ಪ್ರಸಾದ್ ಪ್ರಿಂಟರ್ ಕೊಡುಗೆ ನೀಡಿದರು. ಯಾಸ್ಮೀನ್ ತಾಜ್, ಪರಮೇಶ್, ಸಾಗರ್, ದಿವ್ಯಾ, ಗುರಪ್ಪ, ಮಂಜುನಾಥ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಯುವ ವಿಜ್ಞಾನಿ ಡಾ. ಮಹದೇಶ ಪ್ರಸಾದ್ ಭರವಸೆ
ಅರಕಲಗೂಡು: ತಾಲೂಕಿನ ಶಣವಿನಕುಪ್ಪೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಯುವ ವಿಜ್ಞಾನಿ ಡಾ. ಮಹದೇಶ ಪ್ರಸಾದ್ ಭರವಸೆ ನೀಡಿದರು.
ಶಾಲೆಗೆ ಪ್ರಿಂಟರ್‌ನ್ನು ಕೊಡುಗೆಯಾಗಿ ನೀಡಿದ ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕಾದರೆ ಶಾಲೆಗಳಲ್ಲಿ ಅಗತ್ಯ ಸೌಲಭ್ಯಗಳು ಇರಬೇಕು. ಈ ನಿಟ್ಟಿನಲ್ಲಿ ಶಾಲೆಗೆ ಹೆಚ್ಚುವರಿ ತರಗತಿ ಕೊಠಡಿ ನಿರ್ಮಾಣಕ್ಕೆ ಸಹಕಾರ ನೀಡುವುದರ ಜತೆಗೆ, ವಿದ್ಯಾರ್ಥಿಗಳ ಆನ್‌ಲೈನ್ ಶಿಕ್ಷಣ ಹಾಗೂ ಡಿಜಿಟಲ್ ಕಲಿಕೆಗೆ ಅನುಕೂಲವಾಗುವಂತೆ ಪ್ರೊಜೆಕ್ಟರ್ ವ್ಯವಸ್ಥೆಯನ್ನೂ ಕಲ್ಪಿಸುವುದಾಗಿ ಹೇಳಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನ ಆಧಾರಿತ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದ್ದು, ಗ್ರಾಮೀಣ ವಿದ್ಯಾರ್ಥಿಗಳು ಕೂಡ ಡಿಜಿಟಲ್ ಶಿಕ್ಷಣದಿಂದ ವಂಚಿತರಾಗಬಾರದು. ಶಾಲೆಯ ಅಭಿವೃದ್ಧಿಗೆ ಸಮಾಜದ ಸಹಭಾಗಿತ್ವ ಅಗತ್ಯವಾಗಿದ್ದು, ಶಿಕ್ಷಣಕ್ಕೆ ನೀಡುವ ಪ್ರತಿಯೊಂದು ಕೊಡುಗೆಯೂ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುತ್ತದೆ ಎಂದು ತಿಳಿಸಿದರು.
ಶಾಲೆಯ ಮುಖ್ಯ ಶಿಕ್ಷಕಿ ಯಾಸ್ಮೀನ್ ತಾಜ್, ಸಹ ಶಿಕ್ಷಕರಾದ ಪರಮೇಶ್, ಸಾಗರ್ ಹಾಗೂ ದಿವ್ಯಾ, ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಗುರಪ್ಪ, ಸಂತೋಷ್, ಕುಮಾರ್, ಸ್ವಾಮಿಗೌಡ, ಸುರೇಶ್, ರಾಜೇಗೌಡ, ದೊಡ್ಡೇಗೌಡ ಗ್ರಾಮಸ್ಥರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net