ರಸ್ತೆ ಕಾಮಗಾರಿಗೆ ಶಾಸಕ ಭೂಮಿಪೂಜೆ

ಬೇಲೂರು ತಾಲೂಕಿನ ಅರೇಹಳ್ಳಿಯಿಂದ ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಭೂಮಿಪೂಜೆ ನೆರವೇರಿಸಿದರು. ಚಂದ್ರಶೇಖರ್, ಅಶೋಕ್, ಭರತ್, ಪ್ರಕಾಸ್, ಮಹೇಶ್‌ಶೆಟ್ಟಿ ಇದ್ದರು.
ಬೇಲೂರು ತಾಲೂಕಿನ ಅರೇಹಳ್ಳಿಯಿಂದ ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಭೂಮಿಪೂಜೆ ನೆರವೇರಿಸಿದರು. ಚಂದ್ರಶೇಖರ್, ಅಶೋಕ್, ಭರತ್, ಪ್ರಕಾಸ್, ಮಹೇಶ್‌ಶೆಟ್ಟಿ ಇದ್ದರು.
Published on
ಬೇಲೂರು: ಒಂದು ಕೋಟಿ ರೂ. ವೆಚ್ಚದಲ್ಲಿ ಕಳೆದ ಬಾರಿ ಅರೇಹಳ್ಳಿಯಿಂದ ಚರ್ಚ್‌ವರೆಗೆ ರಸ್ತೆ ನಿರ್ಮಿಸಲಾಗಿತ್ತು. ಆದರೆ ಈಗ ಅದರ ಮುಂದುವರಿದ ಭಾಗವಾಗಿ ಉಳಿದ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ತಾಲೂಕಿನ ಅರೇಹಳ್ಳಿ-ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ ರಸ್ತೆಯ ಡಾಂಬರೀಕರಣ ಕಾಮಗಾರಿಗೆ ವಾಟೇಹಳ್ಳಿ ಸಮೀಪ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಅರೇಹಳ್ಳಿ ಪಟ್ಟಣದಿಂದ ಬ್ಯಾದನೆ ಗ್ರಾಮದವರೆಗೂ ಸುಮಾರು 1.5 ಕೋಟಿ ರೂ.
ವೆಚ್ಚದಲ್ಲಿ 2.5 ಕಿ.ಮೀ ರಸ್ತೆಯ ಡಾಂಬರೀಕರಣ ಕಾಮಗಾರಿ ಸದ್ಯದಲ್ಲೇ ಪ್ರಾರಂಭವಾಗಲಿದೆ. ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು, ರಸ್ತೆಯೂ ಗುಂಡಿ ಬಿದ್ದು ಸುಗಮ ಸಂಚಾರಕ್ಕೆ ಸವಾಲಾಗಿ ಪರಿಣಮಿಸಿತ್ತು. ಆದ್ದರಿಂದ ಈ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿ ಶೀಘ್ರವಾಗಿ ಕಾಮಗಾರಿ ಮುಗಿಸಿ ಸವಾರರಿಗೆ ಅನುಕೂಲ ಮಾಡಿಸಿ ಕೊಡಲಾಗುವುದು ಎಂದರು.
ವಾಟೇಹಳ್ಳಿ ಸಮೀಪದ ಗ್ರಾಮಸ್ಥರಾದ ಚಂದ್ರಶೇಖರ್, ಅಶೋಕ್, ಭರತ್, ಪ್ರಕಾಶ್, ಮಹೇಶ್‌ಶೆಟ್ಟಿ, ಮಂಜುನಾಥ್‌ಶೆಟ್ಟಿ, ಆನಂದ, ಗುಂಡಪ್ಪರಾಜ್ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net