ದೇಶದ ಅಭಿವೃದ್ಧಿಗೆ ಮೋದಿ ಕೊಡುಗೆ ಅಪಾರ

 ನರೇಂದ್ರ ಮೋದಿಯವರು ಪ್ರಧಾನ ಮಂತಿಯಾಗಿ ದೀರ್ಘಾವಧಿಯ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆ ಪಟ್ಟಣದ ಶ್ರೀ ಚನ್ನಕೇಶವಸ್ವಾಮಿಗೆ ಎಚ್.ಕೆ.ಸುರೇಶ್ ವಿಶೇಷ ಪೂಜೆ ಸಲ್ಲಿಸಿದರು. ಸಂಜಯ್ ಗೌರಿ,ಸಿ. ಎಸ್. ಪ್ರಕಾಶ್, ಇತರರಿದ್ದರು.
ನರೇಂದ್ರ ಮೋದಿಯವರು ಪ್ರಧಾನ ಮಂತಿಯಾಗಿ ದೀರ್ಘಾವಧಿಯ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆ ಪಟ್ಟಣದ ಶ್ರೀ ಚನ್ನಕೇಶವಸ್ವಾಮಿಗೆ ಎಚ್.ಕೆ.ಸುರೇಶ್ ವಿಶೇಷ ಪೂಜೆ ಸಲ್ಲಿಸಿದರು. ಸಂಜಯ್ ಗೌರಿ,ಸಿ. ಎಸ್. ಪ್ರಕಾಶ್, ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಚ್.ಕೆ. ಸುರೇಶ್ ಅಭಿಪ್ರಾಯ
ಬೇಲೂರು: ದೇಶದ ಚುನಾಯಿತ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರು ದೀರ್ಘಾವಧಿಯ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ, ಪಟ್ಟಣದ ಶ್ರೀ ಚನ್ನಕೇಶವಸ್ವಾಮಿಗೆ ಶಾಸಕ ಎಚ್.ಕೆ.ಸುರೇಶ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಬುಧವಾರ ಸಂಜೆ ವಿಶೇಷ ಪೂಜೆ ಸಲ್ಲಿಸಿದರು.
ಶಾಸಕ ಎಚ್.ಕೆ.ಸುರೇಶ್ ಮಾತನಾಡಿ, ನರೇಂದ್ರ ಮೋದಿಯವರು ಪ್ರಧಾನಿ ಆದಾಗಿನಿಂದಲೂ ದೇಶದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಭಾರತದ ಗೌರವವನ್ನು ವಿಶ್ವ ಮಟ್ಟದಲ್ಲಿ ಹೆಚ್ಚಿಸಿದ್ದಾರೆ. ಶ್ರೀ ಚನ್ನಕೇಶವಸ್ವಾಮಿಯ ಕೃಪೆಯಿಂದ ಅವರಿಗೆ ಆಯಸ್ಸು, ಆರೋಗ್ಯ ಹಾಗೂ ಇನ್ನಷ್ಟು ಜನಸೇವೆ ಮಾಡುವ ಶಕ್ತಿ ಕೊಡಲಿ ಎಂದು ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದರು.
ಮುಂಬರುವ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೇಲೂರಿಗೆ ಆಗಮಿಸಿ ಶ್ರೀ ಚನ್ನಕೇಶವಸ್ವಾಮಿಯ ದರ್ಶನ ಮತ್ತು ಆಶೀರ್ವಾದ ಪಡೆಯಲಿ ಎಂದರು.
ಬಿಜೆಪಿ ಮುಖಂಡ ಬೆಣ್ಣೂರು ರೇಣು ಕುಮಾರ್ ಮಾತನಾಡಿ, ವಿಶ್ವದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿ ಗುರುತಿಸಿ ಕೊಂಡಿರುವ ನರೇಂದ್ರ ಮೋದಿ ಅವರಿಗೆ ಶ್ರೀ ಚನ್ನಕೇಶವಸ್ವಾಮಿಯ ಆಶೀರ್ವಾದ ಸದಾ ಇರಲಿ. ಹಾಗೂ ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಲಭಿಸಲಿ. ಇನ್ನಷ್ಟು ದೆಶ ಸೇವೆಗೆ ಮುಂದಾಗಲಿದ್ದಾರೆ ಎಂದು ಹಾರೈಸಿದರು.
ಇದೇ ಸಂದರ್ಭ ಬಿಜೆಪಿ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಸಂಜಯ್ ಗೌರಿ, ಜಿಪಂ ಮಾಜಿ ಸದಸ್ಯ ಸಿ. ಎಸ್. ಪ್ರಕಾಶ್, ಮುಖಂಡರಾದ ಗಂಗಾಧರ್, ದಯಾನಂದ್, ರಮೇಶ್ ಕಾರ್ಯಕರ್ತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net