ಚಿಕ್ಕ ಕರಡೇವಿನಿಂದ ಹೆರಗು ರಸ್ತೆ ನಿರ್ಮಾಣ ಕಾಮಗಾರಿಗೆ 2 ಕೋಟಿ ರೂ. ವಿಶೇಷ ಅನುದಾನ ಮಂಜೂರಾಗಿದೆ. ಕಾಮಗಾರಿಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು. ಗ್ರಾಮೀಣ ಭಾಗದ ಶಾಲಾ ಕೊಠಡಿಗಳು, ರಸ್ತೆ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕ ಮತ್ತು ರಸ್ತೆ ಅಭಿವೃದ್ಧಿಗೆ ಸಂಸದರ ಅನುದಾನದಲ್ಲಿ ಆದ್ಯತೆ ನೀಡಲಾಗಿದೆ ಎಂದರು. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಕಾಮಗಾರಿಗಳನ್ನು ಕೈಗೆತ್ತಿ ಕೊಳ್ಳಲಾಗುವುದು ಎಂದು ಅವರು ಹೇಳಿದರು. ಮುಖಂಡರಾದ ಶಶಿಧರ್, ಶಂಕರ್, ರವಿ ಇತರರಿದ್ದರು.