ಇದಲ್ಲದೆ, ಸಂಸದ ಶ್ರೇಯಸ್ ಪಟೇಲ್ ಅವರಿಗೆ ನೋಟಿಸ್ ನೀಡದಿರುವುದು, ಅಂದಿನ ಎಸ್‌ಪಿ ಮಹಮ್ಮದ್ ಸುಜೀತಾ ಅವರ ಪಾತ್ರದ ಕುರಿತು ತನಿಖೆ ನಡೆಸದಿರುವುದು ಅನುಮಾನ ಮೂಡಿಸಿದೆ. ತನಿಖೆ ನಡೆಸಿದ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಪ್ರಭಾವದಲ್ಲಿ ಕೆಲಸ ಮಾಡಿದ್ದಾರೆ. ನಿಜವಾಗಿ ಪೆನ್‌ಡ್ರೈವ್ ಹಂಚಿಕೆ ಮಾಡಿದವರ ಹೆಸರು ಚಾರ್ಜ್‌ಶೀಟ್‌ನಲ್ಲಿ ಇಲ್ಲ. ಈ ಹಿನ್ನೆಲೆಯಲ್ಲಿ, ತನಿಖೆ ನಡೆಸಿದ ಅಧಿಕಾರಿಗಳ ವಿರುದ್ಧವೇ ತನಿಖೆ ನಡೆಸುವಂತೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸುವುದಾಗಿ ಹೇಳಿದರು.