ಎಐ ಆಧಾರಿತ ಶಿಕ್ಷಣಕ್ಕೆ ಸರ್ಕಾರ ಚಿಂತನೆ

ಚಗಚಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ತ್ರಿಮೂರ್ತಿ, ಸಂಪನ್ಮೂಲ ವ್ಯಕ್ತಿಗಳಾದ ಸುಪ್ರೀತಾ, ರಮೇಶ್, ಎಸ್‌ಡಿಎಂಸಿ ಅಧ್ಯಕ್ಷ ಮೋಹನ್ ಕುಮಾರ್ ಇದ್ದರು.
ಚಗಚಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ತ್ರಿಮೂರ್ತಿ, ಸಂಪನ್ಮೂಲ ವ್ಯಕ್ತಿಗಳಾದ ಸುಪ್ರೀತಾ, ರಮೇಶ್, ಎಸ್‌ಡಿಎಂಸಿ ಅಧ್ಯಕ್ಷ ಮೋಹನ್ ಕುಮಾರ್ ಇದ್ದರು.
Published on
ಗಂಡಸಿ: ಜಾಗತಿಕ ಮಟ್ಟದಲ್ಲಿ ಸ್ಪರ್ಧೆಯೊಡ್ಡಲು, ನಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರ ಮಹತ್ವವಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ 3 ತರಗತಿಯಿಂದಲೇ ಎಐ ಆಧಾರಿತ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಂಯೋಜಕ ತ್ರಿಮೂರ್ತಿ ಹೇಳಿದರು.
ಹೋಬಳಿಯ ಚಗಚಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ 1ನೇ ತರಗತಿಯಿಂದಲೇ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳನ್ನು ಪರಿಚಯಿಸುವುದರಿಂದ ಗ್ರಾಮಾಂತರ ಪ್ರದೇಶಗಳಲ್ಲಿ ಆಚರಣೆಯಲ್ಲಿರುವ ಮೂಢನಂಬಿಕೆಗಳ ಬಗ್ಗೆ ಚಿಕ್ಕ ವಯಸ್ಸಿನಲ್ಲೇ ಕೂಲಂಕಷವಾಗಿ ಅಧ್ಯಯನ ಮಾಡಿ ಸರಿ ತಪ್ಪು ಭಾವನೆಗಳನ್ನು ಅರಿತುಕೊಳ್ಳುವ ಮೂಲಕ ಸಮಾಜಕ್ಕೆ ತಿಳಿಸುವ ಸಾಮರ್ಥ್ಯ ಮಕ್ಕಳಲ್ಲಿ ಮೂಡಲಿದೆ ಎಂದರು.
ಶಾಲಾ ಮಕ್ಕಳಿಂದ ವಿಜ್ಞಾನ ವಸ್ತುಪ್ರದರ್ಶನ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ತಯಾರಿಸಿದ ಮಾದರಿಯ ಚಾರ್ಟ್‌ಗಳು, ಸಣ್ಣ ಸಣ್ಣ ಸಂಶೋಧನಾ ಆಧಾರಿತ ಪ್ರಾಜೆಕ್ಟ್‌ಗಳು, ಪರಿಸರ ಸಂರಕ್ಷಣೆ, ಸಿರಿಧಾನ್ಯ, ವ್ಯವಸಾಯದ ಮಾದರಿ, ಬ್ಯಾಂಕಿಂಗ್ ವ್ಯವಹಾರ ಸೇರಿದಂತೆ ಹಲವು ಮಾದರಿಗಳನ್ನು ಪ್ರದರ್ಶಿಸಿ ಗಮನ ಸೆಳೆದರು.
ಎಸ್‌ಡಿಎಂಸಿ ಅಧ್ಯಕ್ಷ ಮೋಹನ್ ಕುಮಾರ್, ಮಾಜಿ ಅಧ್ಯಕ್ಷ ಯೋಗೇಶ್, ಉಪಾಧ್ಯಕ್ಷೆ ಸೌಮ್ಯಾ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಪ್ರೀತಾ, ವೃತ್ತ ಸಂಪನ್ಮೂಲ ವ್ಯಕ್ತಿ ರಮೇಶ್, ಪಾಲಕರು, ಗ್ರಾಮಸ್ಥರು, ಶಿಕ್ಷಕರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net