ವೈದ್ಯಕೀಯ ವೆಚ್ಚದ ಹಣ ಬಿಡುಗಡೆಗೆ ನಿರ್ಲಕ್ಷೃ

ಶಾಸಕ ಎ.ಮಂಜು
ಶಾಸಕ ಎ.ಮಂಜು
Published on

ಪ್ರಮುಖ ಮುಖ್ಯಾಂಶಗಳು

  • ತಾಪಂ ಇಒ ವಿರುದ್ಧ ಕ್ರಮ
  • ಶಾಸಕ ಎ.ಮಂಜು ಭರವಸೆ
ಅರಕಲಗೂಡು : ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ವೈದ್ಯಕೀಯ ವೆಚ್ಚದ ಹಣವನ್ನು ಮಂಜೂರು ಮಾಡಿಕೊಡುವಲ್ಲಿ ನಿರ್ಲಕ್ಷೃ ವಹಿಸಿರುವ ತಾಪಂ ಇಒ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಶಾಸಕ ಎ.ಮಂಜು ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವೈದ್ಯಕೀಯ ವೆಚ್ಚದ ಬಿಲ್‌ಗಳಿಗೆ 2022- 23ನೇ ಸಾಲಿನಿಂದ ಇದುವರೆಗೂ ಹಣ ಬಿಡುಗಡೆಯಾಗಿಲ್ಲ. ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಶಿಕ್ಷಕರು ಲಕ್ಷಾಂತರ ರೂ. ಸಾಲ ಮಾಡಿ ಚಿಕಿತ್ಸೆ ಪಡೆದಿದು,್ದ ಸಾಲ ತೀರಿಸಲಾಗದೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರಸ್ತುತ ಸಾಲಿನಲ್ಲಿ 198 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಆದರೂ ಶಿಕ್ಷಕರ ಸಂಕಷ್ಟಕ್ಕೆ ಸ್ಪಂದಿಸದ ತಾಪಂ ಇಒ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜನಗಣತಿಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ: ಜನಗಣತಿ ನಮ್ಮ ರಾಜ್ಯ ಮತ್ತು ದೇಶದ ಭವಿಷ್ಯ ರೂಪಿಸುವ ಮಹತ್ವದ ಕಾರ್ಯವಾಗಿದೆ. ಇದರ ದೃಷ್ಟಿಯಿಂದ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡಲಿದ್ದಾರೆ. ಆರೋಗ್ಯ, ಶಿಕ್ಷಣ, ಉದ್ಯೋಗ ಮತ್ತು ಮೂಲಭೂತ ಸೌಲಭ್ಯಗಳ ಸಂಗ್ರಹಣೆಗೆ ಜನತೆ ಸಹಕಾರ ನೀಡಬೇಕು.
ಜನಗಣತಿ-2027ರಲ್ಲಿ ಎಲ್ಲರೂ ಭಾಗವಹಿಸಬೇಕು. ಏಪ್ರಿಲ್ 1 ರಿಂದ 15 ರವರೆಗೆ ಆನ್‌ಲೈನ್ ಮೂಲಕ ಮಾಹಿತಿಯನ್ನು ನೋಂದಾಯಿಸಬಹುದು. ಮೊಬೈಲ್ ಫೋನ್ ಮೂಲಕ ಹಾಗೂ ಒಟಿಪಿ ಮೂಲಕ ಸಹ ಮಾಹಿತಿ ನೀಡಬಹುದು. ಜತೆಗೆ, ನಿಮ್ಮ ಭಾಗದ ಅಧಿಕಾರಿಗಳು ಭೇಟಿ ನೀಡುವಾಗ ಸರಿಯಾದ ಮಾಹಿತಿ ನೀಡುವುದು ನಿಮ್ಮ ಕರ್ತವ್ಯವಾಗಿದೆ. ಇನ್ನು ನಿಮಗೆ ಯಾವುದೇ ಮಾಹಿತಿ ಅಥವಾ ಸಹಾಯ ಅಗತ್ಯವಿದ್ದರೆ ಸಂಬಂಧಿತ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದರು.
ಏಪ್ರಿಲ್ 16 ರಿಂದ ಮೇ 16 ರವರೆಗೆ ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ನಡೆಯಲಿದೆ. ಈ ಗಣತಿಯಲ್ಲಿ ಯಾರೂ ಬಿಟ್ಟು ಹೋಗದಂತೆ ನಿಮ್ಮ ಸಹಕಾರ ಅಗತ್ಯವಿದೆ. ಮುಚ್ಚುಮರೆ ಇಲ್ಲದೆ ಜಾತಿ ಹೆಸರನ್ನು ನಮೂದಿಸಬೇಕು. ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ. ಜನಗಣತಿಯನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಶಾಸಕ ಎ.ಮಂಜು ಮನವಿ ಮಾಡಿದರು. ತಹಸೀಲ್ದಾರ್ ಕೆ.ಸಿ. ಸೌಮ್ಯಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net