ಗ್ರಾಮೀಣ ಭಾಗಗಳಿಂದ ಸಮಸ್ಯೆಗಳನ್ನು ಹೊತ್ತು ಬರುವ ರೈತರು ಮತ್ತು ಸಾರ್ವಜನಿಕರು ವಿವಿಧ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇನ್ನು ಮುಂದೆ ಕಡಿಮೆಯಾಗಲಿದೆ. ಜನರಿಗೆ ಸುಲಭವಾಗಿ ಲಭ್ಯವಾಗುವ ಆಡಳಿತ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಈ ಕಚೇರಿಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗಿದೆ. ಜನರ ಸಮಸ್ಯೆಗಳನ್ನು ಆಲಿಸಿ, ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಸಾಧ್ಯವಾದಷ್ಟು ಬೇಗ ಪರಿಹಾರ ಒದಗಿಸುವುದು ತಮ್ಮ ಪ್ರಮುಖ ಗುರಿಯಾಗಿದೆ. ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವರ್ಗದ ಜನರು ಯಾವುದೇ ಅಡೆತಡೆ ಇಲ್ಲದೆ ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರ ಕಚೇರಿಯಲ್ಲಿ ತಿಳಿಸಬಹುದು ಎಂದು ಹೇಳಿದರು.