ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದಿಸಲು ಕಚೇರಿ ಆರಂಭ

ಹಾಸನ ನಗರದ ಬಿ.ಎಂ.ರಸ್ತೆ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಪ್ರಜಾ ಸೌಧದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯನ್ನು ಶಾಸಕ ಎಚ್.ಪಿ.ಸ್ವರೂಪ್ ಲೋಕಾರ್ಪಣೆಗೊಳಿಸಿದರು. ತಹಸೀಲ್ದಾರ್ ಗೀತಾ, ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಸಿ. ಕ್ರಾಂತಿ ಪ್ರಸಾದ್ ತ್ಯಾಗಿ, ಗಿರೀಗೌಡ, ಬಿದರಿಕೆರೆ ಜಯರಾಮ್, ಹೊಂಗೆರೆ ರಘು ಇತರರಿದ್ದರು.
ಹಾಸನ ನಗರದ ಬಿ.ಎಂ.ರಸ್ತೆ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಪ್ರಜಾ ಸೌಧದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯನ್ನು ಶಾಸಕ ಎಚ್.ಪಿ.ಸ್ವರೂಪ್ ಲೋಕಾರ್ಪಣೆಗೊಳಿಸಿದರು. ತಹಸೀಲ್ದಾರ್ ಗೀತಾ, ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಸಿ. ಕ್ರಾಂತಿ ಪ್ರಸಾದ್ ತ್ಯಾಗಿ, ಗಿರೀಗೌಡ, ಬಿದರಿಕೆರೆ ಜಯರಾಮ್, ಹೊಂಗೆರೆ ರಘು ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದಿಸಲು ಕಚೇರಿ ಆರಂಭ
  • ಶಾಸಕ ಎಚ್.ಪಿ.ಸ್ವರೂಪ್ ಹೇಳಿಕೆ
ಹಾಸನ: ನಗರದ ಬಿ.ಎಂ.ರಸ್ತೆ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಪ್ರಜಾ ಸೌಧದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯನ್ನು ಶಾಸಕ ಎಚ್.ಪಿ.ಸ್ವರೂಪ್ ಪೂಜೆ ಸಲ್ಲಿಸುವ ಮೂಲಕ ಸಾರ್ವಜನಿಕ ಸೇವೆಗೆ ಶುಕ್ರವಾರ ಲೋಕಾರ್ಪಣೆಗೊಳಿಸಿದರು.
ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮಾಚರಿಸಲಾಯಿತು. ಹಲವು ಕಾರ್ಯಕರ್ತರು ಮತ್ತು ಸಾರ್ವಜನಿಕರು ಶಾಸಕರಿಗೆ ಶುಭಾಶಯ ಕೋರಿದರು.
ನೂತನ ಕಚೇರಿ ಉದ್ಘಾಟನೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಎಚ್.ಪಿ.ಸ್ವರೂಪ್, ನಗರದ ಪ್ರಜಾ ಸೌಧದಲ್ಲಿ ಶಾಸಕರ ಕಚೇರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿರುವುದು ಸಂತೋಷ ತಂದಿದೆ. ಈಗಾಗಲೇ ತಾಲೂಕು ಕಚೇರಿ, ಎಡಿಆರ್ ಕಚೇರಿ, ಸರ್ವೇ ಇಲಾಖೆ ಸೇರಿದಂತೆ ಹಲವು ಪ್ರಮುಖ ಸರ್ಕಾರಿ ಇಲಾಖೆಗಳು ಇದೇ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಜನರಿಗೆ ತಮ್ಮ ಕೆಲಸಗಳನ್ನು ಒಂದೇ ಸ್ಥಳದಲ್ಲಿ ಸುಲಭವಾಗಿ ಮುಗಿಸಿಕೊಳ್ಳಲು ಅನುಕೂಲವಾಗಲಿದೆ. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ಹಾಗೂ ಸರ್ಕಾರಿ ಸೇವೆಗಳನ್ನು ಒಂದೇ ಸ್ಥಳದಲ್ಲಿ ಸುಲಭವಾಗಿ ಪಡೆಯುವ ಉದ್ದೇಶದಿಂದ ಆರಂಭಿಸಲಾದ ಈ ಕಚೇರಿ ಸಾರ್ವಜನಿಕರಿಗೆ ನೆರವಾಗಲಿದೆ ಎಂದರು.
ಗ್ರಾಮೀಣ ಭಾಗಗಳಿಂದ ಸಮಸ್ಯೆಗಳನ್ನು ಹೊತ್ತು ಬರುವ ರೈತರು ಮತ್ತು ಸಾರ್ವಜನಿಕರು ವಿವಿಧ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇನ್ನು ಮುಂದೆ ಕಡಿಮೆಯಾಗಲಿದೆ. ಜನರಿಗೆ ಸುಲಭವಾಗಿ ಲಭ್ಯವಾಗುವ ಆಡಳಿತ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಈ ಕಚೇರಿಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗಿದೆ. ಜನರ ಸಮಸ್ಯೆಗಳನ್ನು ಆಲಿಸಿ, ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಸಾಧ್ಯವಾದಷ್ಟು ಬೇಗ ಪರಿಹಾರ ಒದಗಿಸುವುದು ತಮ್ಮ ಪ್ರಮುಖ ಗುರಿಯಾಗಿದೆ. ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವರ್ಗದ ಜನರು ಯಾವುದೇ ಅಡೆತಡೆ ಇಲ್ಲದೆ ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರ ಕಚೇರಿಯಲ್ಲಿ ತಿಳಿಸಬಹುದು ಎಂದು ಹೇಳಿದರು.
ಜನರು ನಮ್ಮನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಆ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಸಾರ್ವಜನಿಕರ ಕೆಲಸಗಳನ್ನು ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ಮಾಡಿಕೊಡಲು ಬದ್ಧ. ನಿತ್ಯ ಕಚೇರಿಗೆ ಬಂದು ಜನರ ಅಹವಾಲುಗಳನ್ನು ಆಲಿಸಲಾಗುವುದು ಎಂದರು.
ಪ್ರಜಾ ಸೌಧವನ್ನು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದ್ದರು. ಇದೀಗ ಕಟ್ಟಡ ಸಂಪೂರ್ಣ ಕಾರ್ಯನಿರ್ವಹಣೆಗೆ ಬರುತ್ತಿದೆ. ಇನ್ನೂ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಕೂಡ ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಹೊಂದಿರುವ ಕಚೇರಿ ವ್ಯವಸ್ಥೆ ಆಡಳಿತವನ್ನು ಇನ್ನಷ್ಟು ಜನಪರವಾಗಿಸಲು ಸಹಕಾರಿಯಾಗಲಿದೆ. ಜನರು ತಮ್ಮ ಸಮಸ್ಯೆಗಳಿಗೆ ತ್ವರಿತ ಪರಿಹಾರ ಪಡೆಯಲು ಈ ಕಚೇರಿ ಪ್ರಮುಖ ಕೇಂದ್ರವಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಗೀತಾ, ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಸಿ. ಕ್ರಾಂತಿ ಪ್ರಸಾದ್ ತ್ಯಾಗಿ, ಗಿರೀಗೌಡ, ಬಿದರಿಕೆರೆ ಜಯರಾಮ್, ಹೊಂಗೆರೆ ರಘು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net