ಶುಕ್ರವಾರ ಪಟ್ಟಣದ ಪ್ರವಾಸಿಮಂದಿರದಲ್ಲಿ ವಿಧಾನಸಭಾ ಕ್ಷೇತ್ರದ ಲೋಕಪಯೋಗಿ, ಜಿಲ್ಲಾ ಪಂಚಾಯಿತಿ, ಎತ್ತಿನಹೊಳೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಅವರೊಂದಿಗೆ ಸಭೆ ನಡೆಸಿ ಮಾತನಾಡಿ, ಹೆಚ್ಚು ಮಳೆ ಬೀಳುವ ಮಲೆನಾಡಿನಲ್ಲಿ ರಸ್ತೆಗೆ ಬೀಳುವ ಮಳೆ ನೀರು ಸರಾಗವಾಗಿ ಚರಂಡಿಗೆ ಹರಿದು ಹೋಗಲು ತೋಳಚರಂಡಿ ನಿರ್ಮಾಣ ಅತ್ಯಗತ್ಯ. ಹೊಸ ರಸ್ತೆಗಳು ತೋಳ್‌ಚರಂಡಿ ಇಲ್ಲದೆ ವರ್ಷದಲ್ಲೇ ಹೊಂಡಗಳು ನಿರ್ಮಾಣವಾಗುತ್ತಿವೆ. ಆದ್ದರಿಂದ ಅನ್ಯ ಕೆಲಸಗಳನ್ನು ಬದಿಗೊತ್ತಿ ಚರಂಡಿ ನಿರ್ಮಾಣಕ್ಕೆ ಅದ್ಯತೆ ನೀಡಬೇಕು ಎಂದರು.