ಒಂದು ವರ್ಷದಿಂದ ಖಾತೆ ಬದಲಾವಣೆ ಮಾಡಿಕೊಡುವುದಾಗಿ ಅಧಿಕಾರಿಗಳು ಭರವಸೆ ನೀಡುತ್ತಲೇ ಬಂದಿದ್ದಾರೆ. ಆದರೆ ಇತ್ತೀಚೆಗೆ ದಾಖಲೆಗಳಲ್ಲಿಯೇ ಬದಲಾವಣೆ ಮಾಡಿ ಗೊಂದಲ ಸೃಷ್ಟಿಸಿದ್ದಾರೆ ಎಂದು ದೂರಿದ ಅವರು, ಸಾರ್ವಜನಿಕರು ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾಮಾನ್ಯ ರೈತರ ಕೆಲಸಗಳಿಗೆ ವಿಳಂಬ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.