ರೈಲು ಪ್ರಯಾಣಿಕರಿಗೆ ಭದ್ರತೆ ನೀಡಲು ಹಾಗೂ ಅವರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ರೈಲ್ವೆ ಪೊಲೀಸ್ ಹಗಲಿರುಳು ಎನ್ನದೆ ಶ್ರಮಿಸುತ್ತಿದ್ದಾರೆ. ಆದರೂ ಕೆಲವು ಸಂದರ್ಭಗಳಲ್ಲಿ ಪ್ರಯಾಣಿಕರನ್ನು ವಂಚಿಸಿ ಅವರ ಹಣ ಮತ್ತು ಬೆಲೆಗಳು ವಸ್ತುಗಳನ್ನು ದೋಚಿಕೊಂಡು ಹೋಗುವ ಪ್ರಕರಣ ಮರುಕಳಿಸುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಹ ರೈಲ್ವೆ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಪ್ರಯಾಣಿಕರೂ ತಾವು ಪ್ರಯಾಣಿಸುವ ಸಂದರ್ಭದಲ್ಲಿ ರೈಲು ಹಾಗೂ ನಿಲ್ದಾಣದ ಆವರಣದಲ್ಲಿ ಅನುಮಾನಾಸ್ಪದ ವ್ಯಕ್ತಿ ಕಂಡು ಬಂದರೆ ಸ್ಥಳೀಯ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿದರು.