ಫೆ.27 ರಿಂದ ಮಾ.1 ವರೆಗೆ ಜಾತ್ರಾ ಮಹೋತ್ಸವ ಜರುಗಲಿದ್ದು, ಪ್ರತಿದಿನ ವಿಶೇಷ ಪೂಜೆ, ವಿಶೇಷ ಅಲಂಕಾರ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. 27ರಂದು ತಿಮ್ಮಪ್ಪ ಸ್ವಾಮಿ ಹಾಗೂ ಬೆಟ್ಟದ ಮತ್ತೊಂದು ಬದಿಯಲ್ಲಿರುವ ಪರ್ವತ ಮಲ್ಲೇಶ್ವರ ಸ್ವಾಮಿಗೆ ಅಭಿಷೇಕ, ಲಕ್ಷ್ಮೀ ಶ್ರೀಪದ್ಮಾವತಿ ದೇವಿಯರೊಂದಿಗೆ ಶ್ರೀನಿವಾಸ ಸ್ವಾಮಿಯ ಕಲ್ಯಾಣೋತ್ಸವ ಜರುಗಲಿದೆ.