ರೈತರಿಗಾಗಿ ಹೆಚ್ಚಿನ ತರಬೇತಿ ಕಾರ್ಯಕ್ರಮ ಆಯೋಜಿಸಿ

ಹಾಸನದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ತಂತ್ರಜ್ಞರ ಸಂಸ್ಥೆಯ ಜಿಲ್ಲೆಯ ಪ್ರಾದೇಶಿಕ ಘಟಕದ ಕಾರ್ಯಕಾರಿ ಸಮಿತಿ ಸಭೆ ಆಯೋಜಿಸಲಾಗಿತ್ತು. ಡಾ.ಎ.ಬಿ. ಪಾಟೀಲ್, ಜಂಟಿ ಕೃಷಿ ನಿರ್ದೇಶಕ ಪಿ.ರಮೇಶ್ ಕುಮಾರ್, ತೋಟಗಾರಿಕೆ ಜಂಟಿ ನಿರ್ದೇಶಕ ಯೋಗೀಶ್, ಕೃಷಿ ಕಾಲೇಜಿನ ಡೀನ್ ಡಾ.ಮುನಿಸ್ವಾಮಿ, ಡಾ ರಮೇಶ್ ಇತರರಿದ್ದರು.
ಹಾಸನದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ತಂತ್ರಜ್ಞರ ಸಂಸ್ಥೆಯ ಜಿಲ್ಲೆಯ ಪ್ರಾದೇಶಿಕ ಘಟಕದ ಕಾರ್ಯಕಾರಿ ಸಮಿತಿ ಸಭೆ ಆಯೋಜಿಸಲಾಗಿತ್ತು. ಡಾ.ಎ.ಬಿ. ಪಾಟೀಲ್, ಜಂಟಿ ಕೃಷಿ ನಿರ್ದೇಶಕ ಪಿ.ರಮೇಶ್ ಕುಮಾರ್, ತೋಟಗಾರಿಕೆ ಜಂಟಿ ನಿರ್ದೇಶಕ ಯೋಗೀಶ್, ಕೃಷಿ ಕಾಲೇಜಿನ ಡೀನ್ ಡಾ.ಮುನಿಸ್ವಾಮಿ, ಡಾ ರಮೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರೈತರಿಗಾಗಿ ಹೆಚ್ಚಿನ ತರಬೇತಿ ಕಾರ್ಯಕ್ರಮ ಆಯೋಜಿಸಿ
  • ರಾಜ್ಯ ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷ ಡಾ.ಎ.ಬಿ.ಪಾಟೀಲ್ ಮನವಿ
ಹಾಸನ: ಕೃಷಿ-ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಇಲಾಖೆಯಡಿ ಉತ್ತಮ ಕೆಲಸ ಮಾಡಬಹುದಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದರ ಜತೆಗೆ ರೈತರಿಗೆ ಹೆಚ್ಚಿನ ತರಬೇತಿ ಕಾರ್ಯಕ್ರಮ ಆಯೋಜಿಸಬೇಕು ಎಂದು ರಾಜ್ಯ ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷ ಡಾ.ಎ.ಬಿ.ಪಾಟೀಲ್ ಹೇಳಿದರು.
ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕೃಷಿ ತಂತ್ರಜ್ಞರ ಸಂಸ್ಥೆಯ ಜಿಲ್ಲೆಯ ಪ್ರಾದೇಶಿಕ ಘಟಕದ ಕಾರ್ಯಕಾರಿ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಸಂಸ್ಥೆಯ ಸದಸ್ಯತ್ವ ನೋಂದಣಿ ಕೈಗೊಳ್ಳುವಂತೆ ಸಲಹೆ ನೀಡಿದರು.
ಕಾರ್ಯದರ್ಶಿ ಮೊಸಳೆ ಮಂಜುನಾಥ್ ಮಾತನಾಡಿ, ಐಎಟಿಯನ್ನು 1968ರಲ್ಲಿ ಸ್ಥಾಪಿಸಲಾಯಿತು. ಕೃಷಿ ಅಭಿವೃದ್ಧಿ ಕುರಿತ ವಿಚಾರಗಳನ್ನು ಸಣ್ಣ ಪ್ರಮಾಣದಲ್ಲಿ ಚರ್ಚಿಸುವ ವೇದಿಕೆಯಾಗಿ ಪ್ರಾರಂಭವಾದ ಈ ಸಂಸ್ಥೆ ರಾಜ್ಯ, ದೇಶ ಮತ್ತು ವಿದೇಶಗಳಿಂದ ವೃತ್ತಿಪರರನ್ನು ಆಕರ್ಷಿಸುವ ಮೂಲಕ ಗಾತ್ರದಲ್ಲಿ ಬೆಳೆದಿದೆ. ಐಎಟಿ ರಚನೆಯ ಕಲ್ಪನೆಯನ್ನು ದಿವಂಗತ ಡಾ. ಎಚ್.ಆರ್.ಅರಕೇರಿ ಅವರು ಕಲ್ಪಿಸಿಕೊಟ್ಟಿದ್ದಾರೆ ಎಂದರು.
ಜಿಲ್ಲೆಯಲ್ಲಿ 1921ರಲ್ಲಿ ಸಂಸ್ಥೆ ಸ್ಥಾಪನೆಯಾಗಿದ್ದು, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆ ಹಾಗೂ ಸಹ ಇಲಾಖೆಯ ಪದವೀಧರರು ಸದಸ್ಯರಾಗಿದ್ದು, ಈವರೆಗೆ 131 ಸದಸ್ಯರು ಸಂಸ್ಥೆಯ ಸದಸ್ಯತ್ವ ಪಡೆದಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕ ಪಿ.ರಮೇಶ್ ಕುಮಾರ್, ತೋಟಗಾರಿಕೆ ಜಂಟಿ ನಿರ್ದೇಶಕ ಯೋಗೀಶ್, ಕೃಷಿ ಕಾಲೇಜಿನ ಡೀನ್ ಡಾ. ಮುನಿಸ್ವಾಮಿ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ ರಮೇಶ್, ಉಪ ಕೃಷಿ ನಿರ್ದೇಶಕರಾದ ಕೋಕಿಲಾ, ಬಿ.ಎನ್.ಪ್ರಭಾಕರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net