ಟ್ರಾನ್ಸ್‌ಫಾರ್ಮರ್ ಸುತ್ತ ಗಿಡ ಗಂಟಿ ಬೆಳೆದು ಅಪಾಯ

ಬೇಲೂರು ಪಟ್ಟಣದ ಶ್ರೀ ಚನ್ನಕೇಶವಸ್ವಾಮಿ ದೇವಾಲಯ ಹಿಂಭಾಗದ ಪಾರ್ಕಿಂಗ್ ಸ್ಥಳದಲ್ಲಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸುತ್ತಲೂ ಗಿಡ ಗಂಟಿ ಬೆಳೆದಿರುವುದು.
ಬೇಲೂರು ಪಟ್ಟಣದ ಶ್ರೀ ಚನ್ನಕೇಶವಸ್ವಾಮಿ ದೇವಾಲಯ ಹಿಂಭಾಗದ ಪಾರ್ಕಿಂಗ್ ಸ್ಥಳದಲ್ಲಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸುತ್ತಲೂ ಗಿಡ ಗಂಟಿ ಬೆಳೆದಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • ತೆರವಿಗೆ ಸ್ಥಳೀಯ ನಿವಾಸಿಗಳ ಒತ್ತಾಯ

ಬೇಲೂರು:

ಪಟ್ಟಣದ ಶ್ರೀ ಚನ್ನಕೇಶವಸ್ವಾಮಿ ದೇವಾಲಯ ಹಿಂಭಾಗದ ಪಾರ್ಕಿಂಗ್ ಸ್ಥಳದಲ್ಲಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸುತ್ತಲೂ ಬೆಳೆದಿರುವ ಗಿಡ-ಗಂಟಿಗಳನ್ನು ತೆರವು ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ದೇಗುಲಕ್ಕೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ದೇವಾಲಯ ಹಿಂಭಾಗದ ರಸ್ತೆಯಲ್ಲಿಯೇ ಪಾಕಿರ್ಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು ನೂರಾರು ವಾಹನಗಳು ಪ್ರತಿದಿನ ಇಲ್ಲಿ ನಿಲುಗಡೆಗೊಳ್ಳುತ್ತವೆ. ಇಂತಹ ಜನ ನಿಬಿಡ ಪ್ರದೇಶದಲ್ಲಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸುತ್ತಲೂ ಗಿಡ-ಗಂಟಿಗಳು ಬೆಳೆದು ದಟ್ಟವಾಗಿ ಆವರಿಸಿರುವುದರಿಂದ ವಿದ್ಯುತ್ ಉಪಕರಣಗಳು ಕಾಣದಂತಾಗಿದೆ. ತುರ್ತು ಸಂದರ್ಭ ನಿರ್ವಹಣಾ ಕಾರ್ಯ ಕೈಗೊಳ್ಳಲು ತೊಂದರೆಯಾಗಿದೆ. ಟ್ರಾನ್ಸ್‌ಫಾರ್ಮರ್ ಪಕ್ಕದಲ್ಲೇ ಪ್ರವಾಸಿಗರು ವಾಹನಗಳನ್ನು ನಿಲ್ಲಿಸುವುದರಿಂದ ವಿದ್ಯುತ್ ಅವಘಡ ಸಂಭವಿಸಿದರೆ ಯಾರು ಹೊಣೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಗಿಡ-ಗಂಟಿಗಳು ವಿದ್ಯುತ್ ತಂತಿಗಳಿಗೆ ತಗುಲಿದರೆ ಶಾರ್ಟ್ ಸರ್ಕ್ಯೂಟ್, ಬೆಂಕಿ ಅವಘಡ ಸಂಭವಿಸಬಹುದು. ದೇವಾಲಯಕ್ಕೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಸೆಸ್ಕ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗಿಡ-ಗಂಟಿಗಳನ್ನು ತೆರವುಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net