ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಬಾಲ್ಯ ನ್ಯಾಯ, ಪೋಕ್ಸೋ ಹಾಗೂ ಮಕ್ಕಳ ಸಂರಕ್ಷಣಾ ಯೋಜನೆ ಕುರಿತು ಬುಧವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳ ಸಮಸ್ಯೆಗಳನ್ನು ಕೇವಲ ಕಚೇರಿಯಲ್ಲಿ ಕುಳಿತು ಚರ್ಚಿಸಿದರೆ ಸಾಲದು. ಮಕ್ಕಳೊಂದಿಗೆ ಬೆರೆತು, ಅವರ ನೋವು-ನಲಿವುಗಳನ್ನು ಅರಿತು ಪರಿಹಾರ ಕಂಡುಕೊಳ್ಳಬೇಕಿದೆ ಎಂದು ತಿಳಿಸಿದರು.